ಬೆಂಗಳೂರು- ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಜಯ ಗಳಿಸುವ ಮೂಲಕ ಬಿಜೆಪಿಗೆ ಮುಖಭಂಗ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
ನಾವೇ ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಜನರು ಮುಖಭಂಗ ಆಗುವಂತೆ ಮಾಡಿದ್ದಾರೆ. ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆ ಗೆಲುವಿನ ಮುನ್ಸೂಚನೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಸರ್ಕಾರ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ದೇವೇಗೌಡ ಬಳ್ಳಾರಿ ಬಿಜೆಪಿ ಭದ್ರಕೋಟೆ ಅಂತಾ ಹೇಳುತ್ತಿದ್ರು ಈಗ ಏನಾಯ್ತು ಎಂದು ಅವರು ಪ್ರಶ್ನಿಸಿದ್ದಾರೆ.
22 ವರ್ಷದ ಅಧಿಕಾರವಿಲ್ಲದ ನನ್ನ ವನವಾಸ ಈಗ ಅಂತ್ಯಕಂಡಿದೆ. ಎಲ್ಲ ನಾಯಕರು ಸೇರಿ ನನಗೆ ಅಧಿಕಾರ ಕೊಡಿಸಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ.
ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾಗಾಗಿ ನಡೆದ ಉಪಚುನಾವಣೆಯಲ್ಲಿ ಶಿವಮೊಗ್ಗವೊಂದು ಕ್ಷೇತ್ರವೊಂದು ಬಿಜೆಪಿ ಪಾಲಾಗಿದ್ದು ಬಿಟ್ಟರೆ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅದರಲ್ಲೂ ಬಿಜೆಪಿಯ ಭದ್ರಕೋಟೆಯಾಗಿದ್ದ ಬಳ್ಳಾರಿ ಕ್ಷೇತ್ರವು ಕಾಂಗ್ರೆಸ್ ಪಾಲಾಗುವುದರ ಮೂಲಕ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.