HD Kumaraswamy: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
Actress Radhika Kumaraswamy Daughter: ಮೂಲತಃ ಮಂಗಳೂರಿನವರಾದ ಸ್ಯಾಂಡಲ್ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ನಟಿ ಹಾಗೂ ನಿರ್ಮಾಪಕಿಯಾಗಿ ಸಿನಿರಂಗದಲ್ಲಿ ಸಕ್ರಿಯರಾಗಿದ್ದಾರೆ.. ಈ ಬ್ಯೂಟಿಯ ಮಗಳು ಈಗ ಹೇಗಿದ್ದಾರೆ ನೀವೆ ನೋಡಿ..
ರಾಜ್ಯದಲ್ಲಿ ಇದು ದೊಡ್ಡಮಟ್ಟದ ಮಳೆಯ ಅನಾಹುತ. ಹಿಂದೆ ಕೆಲವೇ ಜಿಲ್ಲೆಗಳಲ್ಲಿ ಇಂಥ ಅನಾಹುತವಾಗಿತ್ತು. ಆದರೆ ಈ ಬಾರಿಯ ಪರಿಸ್ಥಿತಿ ಎಲ್ಲರ ಕೈ ಮೀರಿ ಹೋಗಿದೆ. ಬೆಳಗಾವಿ ಜನರ ಬದುಕು ಶೋಚನೀಯವಾಗಿದೆ.
ಉತ್ತರ ಕರ್ನಾಟಕದ ಈಗ ಭೀಕರ ಪ್ರವಾಹ ಪರಿಸ್ಥಿತಿ ಹಿನ್ನಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಬೆಳಗಾವಿಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಹೆಚ್ಚಿನ ನೆರವು ನೀಡಬೇಕೆಂದು ವಿನಂತಿಸಿಕೊಂಡರು.
ಶುಕ್ರವಾರದಂದು 1.30 ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ರಾಜ್ಯಪಾಲರು ಪತ್ರ ಬರೆದು ವಿಶ್ವಾಸ ಮತಯಾಚನೆಗೆ ಆದೇಶಿಸಿದ್ದರು. ಆದರೆ ಈಗ ರಾಜ್ಯಪಾಲರ ಆದೇಶವು ಕೂಡ ಜಾರಿ ಆಗದೆ ಉಳಿದಿದೆ.ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದು ಇಂದು ಸಂಜೆ ಆರು ಗಂಟೆ ವೇಳೆ ವಿಶ್ವಾಸ ಮತಯಾಚನೆಗೆ ಕಾಲಾವಧಿಯನ್ನು ನಿಗದಿಪಡಿಸಿದ್ದಾರೆ.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಸಕಲೇಶಪುರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿಯೂ, ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯದಲ್ಲಿನ ಬರ ಪರಿಹಾರ ನಿರ್ವಹಣೆ, ರೈತರ ಸಾಲ ಮನ್ನಾ ಯೋಜನೆ ಹಾಗೂ ಜಿಂದಾಲ್ ಸಂಸ್ಥೆ ಭೂಮಿ ಮಾರಾಟ ಕುರಿತಾಗಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಈಗ ಸಿಎಂ ಕುಮಾರಸ್ವಾಮಿ ಈ ವಿಚಾರವಾಗಿ ತಾವು ಚರ್ಚಿಸಲು ಸಿದ್ಧ ಎಂದು ವಿರೋಧ ಪಕ್ಷದ ನಾಯಕ ಬಿಎಸ್ ಯಡಿಯೂರಪ್ಪನವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿನ ಸಮಸ್ಯೆ ಇದೆ ಆದರ ಬಗ್ಗೆ ಯಾವುದೇ ಕ್ರಮಗೊಳ್ಳದೆ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ಸ್ವೀಕಾರ ಕಾರ್ಯಕ್ರಮದ ಹಿನ್ನಲೆಯಲ್ಲಿ ಗುರುವಾರದಂದು ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದರು.
ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರವನ್ನು ರಚನೆ ಮಾಡುವ ನಿಟ್ಟಿನಲ್ಲಿ ಎಲ್ಲ ಪ್ರತಿಪಕ್ಷಗಳನ್ನು ಭೇಟಿ ಮಾಡುತ್ತಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈಗ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.
ಶ್ರೀಲಂಕಾದ ಕೊಲೊಂಬೋದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟದಿಂದ 300 ಕ್ಕೂ ಅಧಿಕ ಜನರು ಮೃತಪಟ್ಟು 500 ಜನರು ಗಾಯಗೊಂಡಿದ್ದರು.ಇದೇ ಸ್ಪೋಟದಲ್ಲಿ ಜೆಡಿಎಸ್ ಕಾರ್ಯಕರ್ತರು ಕೂಡ ಮೃತಪಟ್ಟಿದ್ದರು.
ಸುಗ್ಗಿ ಹಬ್ಬಕ್ಕೆ ರೈತರಿಗೆ ಉಡುಗೊರೆ ನೀಡಿದ್ದ ರಾಜ್ಯ ಸರ್ಕಾರ, ಜನವರಿ 11 ರವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ 1.1 ಲಕ್ಷ ಸಹಕಾರಿ ಬ್ಯಾಂಕುಗಳ ಸಾಲಖಾತೆಗಳಿಗೆ 616 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 58 ಸಾವಿರ ಸಾಲಖಾತೆಗಳಿಗೆ 260 ಕೋಟಿ ರೂ. ರೈತರ ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.