ಭಾನುವಾರದಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ 14 ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಕ್ರಮವನ್ನು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ವ್ಯಂಗ್ಯವಾಡಿರುವ ಬಿಜೆಪಿಯ ಕೆ.ಎಸ್.ಈಶ್ವರಪ್ಪ ಒಂದು ವೇಳೆ ಅವರಿಗೆ 28 ಮಕ್ಕಳು ಇದ್ದಿದ್ದರೆ ಎಲ್ಲರಿಗೂ ಟಿಕೆಟ್ ನೀಡಿ ಎಲ್ಲ ಲೋಕಸಭಾ ಕ್ಷೇತ್ರಗಳಿಗೂ ನಿಲ್ಲಿಸುತ್ತಿದ್ದರು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಸರ್ಕಾರದ ಪ್ರಮುಖರು ರಾಜ್ಯದಲ್ಲಿ ಬರಗಾಲವನ್ನು ಕಡೆಗಣಿಸಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.
ದೇವೇಗೌಡರು, ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಸಿದ್ದರಾಮಯ್ಯ ಅವರು ಎಸಿ ರೂಂನಲ್ಲಿ ಕೂರುವುದನ್ನು ಬಿಟ್ಟು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ ಎಂದು ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಶನಿ, ಸಚಿವ ಹೆಚ್.ಡಿ.ರೇವಣ್ಣ ಕೇತು ಇದ್ದಂತೆ. ಅಂತವರನ್ನ ಕಟ್ಟಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.