ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.. ಸಂಸತ್ ಒಳಗೂ, ಹೊರಗೂ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿವೆ. ಕಪ್ಪು ಬಟ್ಟೆ ಧರಿಸಿ ʻಕೈʼ ನಾಯಕರು ಹೋರಾಟ ಮಾಡಿದ್ದಾರೆ.. ಇದೇ ವೇಳೆ ಎಐಸಿಸಿ ಅಧ್ಯಕ್ಷ ಖರ್ಗೆ ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದ್ರು.
ಈರುಳ್ಳಿ ಬೆಲೆ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಸಂಪೂರ್ಣ ನಿಷೇಧಿಸಿದ್ದರಿಂದ ರಾಜ್ಯದ ಕೆಂಪು ಗುಲಾಬಿ ಈರುಳ್ಳಿ ಬೆಳೆಗಾರರು ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದರು.
ತ್ರಿಪುರದಲ್ಲಿ ಅನರ್ಹ ವ್ಯಕ್ತಿಯನ್ನು ಚುನಾವಣೆಯಲ್ಲಿ ನಿಲ್ಲಲು ಅವಕಾಶ ಮಾಡಿಕೊಡುವ ಮೂಲಕ ಚುನಾವಣಾ ಆಯೋಗ ದ್ವಂದ್ವ ನಿಲುವು ಪ್ರದರ್ಶಿಸುತ್ತಿದೆ. ಈ ಮೂಲಕ ಆಯೋಗ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ವಿ.ಎಸ್.ಉಗ್ರಪ್ಪ ಟೀಕಿಸಿದ್ದಾರೆ.
ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ ಎಂದಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ದಾಖಲೆಗಳ ಪ್ರಮಾಣೀಕರಣದ ಸಮೇತ ಸಲ್ಲಿಸಲು ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿದೆ.
ಶತಮಾನದಲ್ಲೇ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಬಾಗಲಕೋಟೆಗೆ 10 ಕೋಟಿ ರೂ. ಹಾಗೂ ವಿಜಯಪುರಕ್ಕೆ 5 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ತಿಳಿಸಿದ್ದಾರೆ.
ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಅರ್ಹತಾ ಪರೀಕ್ಷೆ ಬರೆಯಲು ಈಗ ಕೇಂದ್ರ ಸರ್ಕಾರ ಅನುಮತಿ ನೀಡಿ ಮಹತ್ವದ ಘೋಷಣೆ ಹೊರಡಿಸಿದೆ. ಆ ಮೂಲಕ ಕನ್ನಡದಲ್ಲಿ ಬ್ಯಾಕಿಂಗ್ ಪರೀಕ್ಷೆಗಳನ್ನು ನಡೆಸಬೇಕೆಂಬ ಬಹುದಿನಗಳ ಕನ್ನಡಿಗರ ಬೇಡಿಕೆ ಕೂಡ ಈಡೇರಿದಂತಾಗಿದೆ.
ಕೇಂದ್ರ ಸರ್ಕಾರ ಮತ್ತು ವಾಟ್ಸಪ್ ಕಂಪನಿ ಸಮರ ಮುಂದುವರೆದಿದ್ದು ಈಗ ಅದು ದೇಶದಿಂದಲೇ ಕಂಪನಿಯನ್ನು ಬ್ಯಾನ್ ಮಾಡುವ ಹಂತಕ್ಕೆ ತಲುಪಿದೆ ಎಂದು ಇಂಡಿಯಾ ಟೈಮ್ಸ್ ಡಾಟ್.ಕಾಮ್ ವರದಿ ಮಾಡಿದೆ.
ಮುಸ್ಲಿಮ್ ಮಹಿಳೆಯರ ಮದುವೆ ಮತ್ತು ಬಹುಪತ್ನಿತ್ವದ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಕಾನೂನು ಆಯೋಗಕ್ಕೆ ಸೂಚನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ತಾನು ಈ ಬಾರಿ ಬಜೆಟ್ ಸಂತೋಷದಾಯಕವಲ್ಲ ಎಂದು ಹೇಳಿದ್ದಾರೆ. ಅಂದರೆ, ಸಮಾಜದ ದೊಡ್ಡ ಭಾಗವು ಈ ಬಜೆಟ್ನೊಂದಿಗೆ ಅಸಮಾಧಾನಗೊಳ್ಳಬಹುದು ಮತ್ತು ಸಾರ್ವಜನಿಕರ ಅಸಮಧಾನದ ನೇರ ಪರಿಣಾಮವು ಸರ್ಕಾರದ ಮತ ಬ್ಯಾಂಕ್ನಲ್ಲಿರುತ್ತದೆ ಎಂದು ಸರ್ಕಾರವು ತಿಳಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.