ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದನ್ನು ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಕರೆದ ನಂತರ ಭಾರತ ಚೀನಾಗೆ ತಿರುಗೇಟು ನೀಡಿದೆ.
ಕಾಶ್ಮೀರದಲ್ಲಿ ಜನರ ಸ್ವಾತಂತ್ರ್ಯ ಮತ್ತು ಮಾಧ್ಯಮ ನಿರ್ಬಂಧಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನಿಭಾಯಿಸುವಲ್ಲಿ ಭಾರತದ ಸುಪ್ರೀಂಕೋರ್ಟ್ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಕಾಶ್ಮೀರದಲ್ಲಿ ಜನರ ಹಕ್ಕುಗಳನ್ನು ಸಂಪೂರ್ಣವಾಗಿ ಪುನಃ ಸ್ಥಾಪಿಸಲು ನರೇಂದ್ರ ಮೋದಿ ಸರ್ಕಾರವನ್ನು ವಿಶ್ವಸಂಸ್ಥೆ ಒತ್ತಾಯಿಸಿದೆ.
28 ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಕುರಿತು ಚರ್ಚಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. ಈ ಶುಭ ಸಂದರ್ಭದಲ್ಲಿ ಪಿಎಂ ಮೋದಿ ಸೈನಿಕರಿಗೆ ಸಿಹಿ ತಿಂಡಿಗಳನ್ನು ವಿತರಿಸಿದರು.
370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಬಂಧ ಇನ್ನೂ ಎಷ್ಟು ದಿನಗಳ ಕಾಲ ಮುಂದುವರೆಯಲಿದೆ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಸೋಮವಾರ ಭಾರತದ ವಿರುದ್ಧ ಯಾವುದೇ ದುಸ್ಸಾಹಸ ಮಾಡುವ ಬಗ್ಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು, ಪಾಕಿಸ್ತಾನ ಉಗ್ರ ಚಟುವಟಿಕೆ ತಡೆಯದಿದ್ದಲ್ಲಿ ಭಾರತೀಯ ಸೇನೆಯು ಒಳಕ್ಕೆ ಹೋಗಿ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸುತ್ತದೆ ಎಂದು ಹೇಳಿದ್ದಾರೆ.
ಸರ್ಕಾರವು ನಿರ್ಬಂಧಗಳನ್ನು ತೆಗೆದುಹಾಕಿ ಸಹಜ ಸ್ಥಿತಿ ಪುನಃಸ್ಥಾಪಿಸುವವರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯಲ್ಲಿ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೋಲಿಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ್ದನ್ನು ಅಪಹಾಸ್ಯ ಮಾಡಿದವರ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಂಜಾಬ್ನ ಸೇಬು ವ್ಯಾಪಾರಿಯೊಬ್ಬರನ್ನು ಇಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಮೂರು ದಿನಗಳಲ್ಲಿ ರಾಜ್ಯದ ಹೊರಗಿನ ವ್ಯಕ್ತಿಯೊಬ್ಬನ ಮೂರನೇ ಹತ್ಯೆಯಾಗಿದೆ.
ನವದೆಹಲಿ: ಇಂದು ಛತ್ತೀಸ್ ಗಡ್ ದ ಕಾರ್ಮಿಕನನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.ಶೋಪಿಯಾನ್ನಲ್ಲಿ ಟ್ರಕ್ ಚಾಲಕನನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ.
ಅಕ್ಟೋಬರ್ 22 ರಂದು ನಿಗದಿಯಾಗಿರುವ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಕುರಿತ ಯುಎಸ್ ಕಾಂಗ್ರೆಸ್ ಸಮಿತಿಯ ವಿಚಾರಣೆಗೂ ಮುನ್ನ ಹೌಸ್ ವಿದೇಶಾಂಗ ಸಮಿತಿಯು ರಾಜ್ಯದಲ್ಲಿನ ಸಂವಹನ ನಿರ್ಬಂಧವು ವಿನಾಶಕಾರಿ ಪರಿಣಾಮವನ್ನು ಹೊಂದಿದ್ದು, ಆದ್ದರಿಂದ ಈ ನಿರ್ಬಂಧಗಳನ್ನು ತೆಗೆದುಹಾಕುವ ಸಮಯ ಎಂದು ಹೇಳಿದೆ
ದಕ್ಷಿಣ ಕಾಶ್ಮೀರದ ಅನಂತ್ನಾಗ್ ಟೌನ್ಶಿಪ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಟ್ರಾಫಿಕ್ ಪೊಲೀಸ್ ಸೇರಿದಂತೆ 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
50 ದಿನಗಳಿಗೂ ಹೆಚ್ಚು ಕಾಲ ಗೃಹಬಂಧನದಲ್ಲಿದ್ದ ಕಾಶ್ಮೀರದ ರಾಜಕೀಯ ಮುಖಂಡರನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಸಲಹೆಗಾರರೊಬ್ಬರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.