ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ನಾಯಕರು ತಮ್ಮ ತಂದೆ ಲಾಲು ಪ್ರಸಾದ್ ಯಾದವ್ ಅವರನ್ನು ಜೈಲಿಗೆ ಕಳುಹಿಸಲು ಕಾರಣರಾಗಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಶ್ವಿ ಯಾದವ್ ಆರೋಪಿಸಿದ್ದಾರೆ.
ಆರ್ಜೆಡಿ ಮುಖಂಡ ಲಾಲು ಪ್ರಸಾದ್ ಅವರ ಪತ್ನಿ ರಾಬ್ರಿ ದೇವಿ, ಮಗ ತೇಜಶ್ವಿ ಯಾದವ್ ಮತ್ತು ಇತರ ಆರೋಪಿಗಳಿಗೆ ಐಆರ್ಸಿಟಿಸಿ ಹಗರಣದಲ್ಲಿ ದೆಹಲಿ ಪಟೀಯಾಲ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.
ಸಚಿವ ಸಂಪುಟದಲ್ಲಿ ಹಲವು ಹೆಸರುಗಳು ಕೇಳಿಬಂದಿದ್ದವು. ಆದರೆ ನಿತೀಶ್ ಕುಮಾರ್, ಲಾಲು ಯಾದವ್ ಅವರನ್ನು ಈ ಹಗರಣದಲ್ಲಿ ಸಿಲುಕಿಸಿದ್ದಾರೆ ಎಂದು ಲಾಲೂ ಯಾದವ್ ಪುತ್ರ ತೇಜಸ್ವಿ ಯಾದವ್ ತಿಳಿಸಿದ್ದಾರೆ.