ಪ್ರಧಾನಿ ನರೇಂದ್ರ ಮೋದಿಯವರ ವಿಶೇಷ ವಿಮಾನವನ್ನು ತನ್ನ ವಾಯುಪ್ರದೇಶದ ಬಳಕೆಯನ್ನು ನಿರಾಕರಿಸುವ ಪಾಕಿಸ್ತಾನದ ಕ್ರಮದ ನಂತರ, ಭಾರತವು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಗೆ (ಐಸಿಎಒ) ದೂರು ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. ಈ ಶುಭ ಸಂದರ್ಭದಲ್ಲಿ ಪಿಎಂ ಮೋದಿ ಸೈನಿಕರಿಗೆ ಸಿಹಿ ತಿಂಡಿಗಳನ್ನು ವಿತರಿಸಿದರು.
ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ಪ್ರಸಾರ ಕಾರ್ಯಕ್ರಮ 'ಮನ್ ಕಿ ಬಾತ್' ಅನ್ನು ಉದ್ದೇಶಿಸಿ ಮಾತನಾಡಿ, ತಮ್ಮ ಭಾಷಣದಲ್ಲಿ ಅವರು ಉತ್ಸವ ಪ್ರವಾಸೋದ್ಯಮದ ಕಲ್ಪನೆಯನ್ನು ಮುಂದಿಟ್ಟರು.
ನ್ಯೂಜಿಲೇಂಡ್, ಅಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ RCEP ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ. ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣಶಾಸನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಗುರುನಾನಕ್ ದೇವ್ ಅವರ 550ನೇ ಜನ್ಮ ದಿನಾಚರಣೆಗೆ ಮೂರೂ ದಿನಗಳು ಮುಂಚಿತವಾಗಿ
ಕರ್ತಾರ್‌ಪುರ ಕಾರಿಡಾರ್ ಅನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ಇಚ್ಚಿಸಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರ ಮುಗಿದ ನಂತರ ಶಿವಸೇನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರಂತಹ ನಾಯಕರೊಂದಿಗೆ ಇಷ್ಟು ಬಿಜೆಪಿ ರ್ಯಾಲಿಗಳು ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರದಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸರ್ಕಾರದ ಕೆಲಸ ಆರ್ಥಿಕತೆಯನ್ನು ಸುಧಾರಿಸುವುದೇ ಹೊರತು ಕಾಮಿಡಿ ಸರ್ಕಸ್ ನಡೆಸುವುದು ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ
ಕೇಂದ್ರದ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿರುವ ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ' ಮೋದಿ ಸರ್ಕಾರವು ಆರ್ಥಿಕ ಸುಧಾರಣೆಗೆ ಬದಲು ವಿಭಜನೆ ಮತ್ತು ಧ್ರುವೀಕರಣ ನೀತಿ ಅನುಸರಿಸುವುದರಲ್ಲಿ ತಲ್ಲೀನವಾಗಿದೆ ಎಂದು ಕಿಡಿ ಕಾರಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ್ದನ್ನು ಅಪಹಾಸ್ಯ ಮಾಡಿದವರ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.