ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿಯೇತರ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಗುರುವಾರದಂದು ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿರುವ ಚಾಯ್ ವಾಲಾ ಜನರಿಗೆ ಉಚಿತವಾಗಿ ಚಹಾ ವಿತರಿಸಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ರಾಜ್ಯದಾದ್ಯಂತ ಮತದಾನ-ಸಂಬಂಧಿತ ಹಿಂಸಾಚಾರದಲ್ಲಿ 50 ಕ್ಕೂ ಅಧಿಕ ಜನರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದ್ದು, ಮಾಧ್ಯಮ ವರದಿಗಳ ಬಳಿಕ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸಮಾರಂಭಕ್ಕೆ ತೆರಳದೆ ಇರಲು ತೀರ್ಮಾನಿಸಿದ್ದಾರೆ.
ಕೋಲ್ಕತ್ತಾದಲ್ಲಿ ವಿದ್ಯಾಸಾಗರ ಪ್ರತಿಮೆಯನ್ನು ಪುನರ್ ನಿರ್ಮಿಸುವುದಾಗಿ ಮೋದಿ ಭರವಸೆ ನೀಡಿದ್ದಾರೆ. ನಾವು ಅವರ (ಬಿಜೆಪಿ) ಹಣವನ್ನು ಏಕೆ ತೆಗೆದುಕೊಳ್ಳಬೇಕು, ಬಂಗಾಳವು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಉತ್ತರಪ್ರದೇಶದ ಮವುನಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರೋಡ್ ಶೋ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ನೇರ ಹೊಣೆ. ಕೊಲ್ಕತ್ತಾದಲ್ಲಿ ಹಂಗಾಮ ನಡೆಸಿದ್ದೇ ಬಿಜೆಪಿ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರೇ ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದು ಎಂದು ಮಮತಾ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.