ಯೋಧರ ಸಾವು ದೇಶದಲ್ಲಿ ಭಯೋತ್ಪಾದನೆಯನ್ನು ನಾಶ ಮಾಡಲೇಬೇಕೆಂಬ ಛಲ ಹುಟ್ಟಿಸಿದೆ. ಹೀಗಾಗಿ ಈಗಾಗಲೇ ಭದ್ರತಾ ಪಡೆ ತನ್ನ ಭಾಷೆಯಲ್ಲಿಯೇ ಭಯೋತ್ಪಾದಕರಿಗೆ ಉತ್ತರಿಸಿದೆ ಎಂದು ಮೋದಿ ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಜನರನ್ನು ಹಾದಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತು ಮಾತಿಗೂ ಕಣ್ಣೀರು ಹಾಕುವ ಇಂಥಾ ಮುಖ್ಯಮಂತ್ರಿ ಮತ್ತು ಇಂಥಾ ಸರ್ಕಾರ ಎಲ್ಲಿಯೂ ಇಲ್ಲ ಎಂದು ಮೋದಿ ಟೀಕಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಜನರ ಬೇಡಿಕೆಗಳ ಬಗ್ಗೆ ಯಾವುದೇ ಸೂಕ್ಷ್ಮ ಕಾಳಜಿ ಇಲ್ಲ. ಬದಲಾಗಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವ ಕಡೆ ಹೆಚ್ಚು ಗಮನ ಹರಿಸುತ್ತದೆ ಎಂದು ಪ್ರಧಾನಿ ಮೋದಿ ಟೀಕಿಸಿದರು.
ವಿಜಯ ಚೌಕದಿಂದ ಬೆಳಗ್ಗೆ 9:50ಕ್ಕೆ ಪಥಸಂಚಲನ ಆರಂಭವಾಗಲಿದ್ದು, ರಾಜಪಥ, ತಿಲಕ್ ಮಾರ್ಗ, ಬಹದ್ದೂರ್ ಶಾ ಝಫರ್ ಮಾರ್ಗ, ನೇತಾಜಿ ಸುಭಾಷ್ ಮಾರ್ಗವಾಗಿ ಸಾಗಿ ಕೆಂಪು ಕೋಟೆ ತಲುಪಲಿದೆ. 90 ನಿಮಿಷಗಳ ಪೆರೇಡ್ನಲ್ಲಿ ವಿವಿಧ ರಾಜ್ಯಗಳ ಹಾಗೂ ಸರ್ಕಾರಿ ಇಲಾಖೆಗಳ 22 ಸ್ತಬ್ಧಚಿತ್ರಗಳ ಪ್ರದರ್ಶನ ಸಹ ನಡೆಯಲಿದೆ.
ನೇತಾಜಿ ಮ್ಯೂಸಿಯಂನಲ್ಲಿ ಸುಭಾಷ್ ಚಂದ್ರ ಬೋಸ್ ಬಳಸುತ್ತಿದ್ದ ಮರದ ಕುರ್ಚಿ ಮತ್ತು ಖಡ್ಗ, ಪದಕಗಳು, ಬ್ಯಾಡ್ಜ್ಗಳು, ಸಮವಸ್ತ್ರ ಹಾಗೂ ಸೇನೆಗೆ ಸಂಬಂಧಪಟ್ಟ ಇತರ ಅಪರೂಪದ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ.
ಪ್ರವಾಸಿ ಭಾರತ್ ದಿನದ ಅಂಗವಾಗಿ ವಾರಾಣಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ನಿಧನಕ್ಕೆ ಸಂತಾಪ ಸೂಚಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆ 10.30ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ.
ಬಡತನ, ಹಸಿವು, ಸಾಮಾಜಿಕ ಅನ್ಯಾಯಗಳಂತಹ ಪಿಡುಗುಗಳನ್ನು ನಿರ್ಮೂಲನ ಮಾಡಲು ಶ್ರೀಗಳು ತಮ್ಮ ಬದುಕನ್ನು ಮುಡಿಪಾಗಿಟ್ಟಿದ್ದರು ಎಂದು ಟ್ವೀಟ್ ಮೂಲಕ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು MyGov.In ವೆಬ್ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು, 'ಪರೀಕ್ಷಾ ಪೇ ಚರ್ಚಾ' ಸ್ಪರ್ಧೆಯಲ್ಲಿ ಭಾಗವಹಿಸಿ ದೆಹಲಿಯ ಟಾಕಟೋರಾ ಕ್ರೀಡಾಂಗಣದಲ್ಲಿ ಪ್ರಧಾನಮಂತ್ರಿಯೊಂದಿಗೆ ನಡೆಯಲಿರುವ ಸಂವಾದದಲ್ಲಿ ಪಾಲ್ಗೊಳ್ಳಬಹುದು.
ಕರ್ನಾಟಕದಲ್ಲಿ ಲಕ್ಷಾಂತರ ರೈತರ ಸಾಲ ಮನ್ನಾ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಸರಕಾರ ಭರವಸೆ ನೀಡಿತ್ತು. ಆದರೆ, ಕೇವಲ 800 ರೈತರ ಸಾಲ ಮನ್ನಾ ಮಾತ್ರ ಮಾಡಿದೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.