ಮೆಟ್ರೊ ಕಾರ್ ಶೆಡ್ಗೆ ದಾರಿ ಮಾಡಿಕೊಡಲು 2,600 ಕ್ಕೂ ಹೆಚ್ಚು ಮರಗಳನ್ನು ಕಡಿಯುವ ಉದ್ದೇಶದಿಂದ ಮುಂಬೈನ ಆರೆ ಕಾಲೊನಿಯನ್ನು ಅರಣ್ಯವೆಂದು ಘೋಷಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಮರಗಳನ್ನು ಕಡಿಯುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ಇಂದು ನ್ಯಾಯಾಲಯ ರದ್ದುಪಡಿಸಿದೆ.
ಎಲ್ಗರ್ ಪರಿಷತ್-ಭೀಮಾ ಕೋರೆಗಾಂವ್ ಪ್ರಕರಣದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಬುಧವಾರದಂದು ಕೆಲವು ಪುಸ್ತಕಗಳು ಮತ್ತು ಸಿಡಿಗಳ ಪ್ರತಿಗಳನ್ನು ಇಟ್ಟುಕೊಳ್ಳುವುದರ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದೆ.
ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ (ಎಂಎಸ್ಸಿಬಿ) ಹಗರಣ ಪ್ರಕರಣದಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ಮತ್ತು 70 ಕ್ಕೂ ಹೆಚ್ಚು ಜನರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗಕ್ಕೆ (ಇಒಡಬ್ಲ್ಯೂ) ನಿರ್ದೇಶನ ನೀಡಿದೆ.
ಮರಾಠರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಇಂದು ಎತ್ತಿಹಿಡಿದಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಆದಾಗ್ಯೂ ಸರ್ಕಾರವು ಉಲ್ಲೇಖಿಸಿದ ಶೇಕಡಾ 16 ರ ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಿ, ಇದು ಸಮರ್ಥನೀಯ ಅಲ್ಲ ಎಂದು ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಐ.ಎ.ಮಹಂತಿ ಮತ್ತು ಎ.ಎಂ.ಬದಾರ್ ಅವರಿದ್ದ ವಿಭಾಗೀಯ ಪೀಠ ಆರೋಪಿಗಳಾದ ಧನ್ ಸಿಂಗ್, ಲೋಕೇಶ್ ಶರ್ಮಾ, ಮನೋಹರ್ ನರ್ವಾರಿಯಾ ಮತ್ತು ರಾಜೇಂದ್ರ ಚೌಧರಿ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಬಾಂಬೆ ಹೈಕೋರ್ಟ್ ನ್ಯಾಯಧೀಶರೊಬ್ಬರು ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ಬೆಳಿಗ್ಗೆ 10 ಗಂಟೆಯಿಂದ ಶುಕ್ರವಾರ ತಡರಾತ್ರಿ 3.30ರವರೆಗೂ ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.