ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆಯು ಭಾನುವಾರ ದಾಳಿ ನಡೆಸಿದೆ. ಭಾರತೀಯ ಸೇನೆಯ ದಾಳಿಯ ನಂತರ ಪಾಕಿಸ್ತಾನ ಕಡೆಯಿಂದ ಭಾರಿ ಹಾನಿ ಮತ್ತು ಸಾವುನೋವು ಸಂಭವಿಸಿದೆ ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್, ಪಾಕಿಸ್ತಾನದಿಂದ ಉಗ್ರರ ಒಳನುಸುಳುವಿಕೆ ಪ್ರಯತ್ನ ಪ್ರತಿದಿನವೂ ನಡೆಯುತ್ತಿವೆ ಎಂದು ಅವರು ಹೇಳಿದರು.
ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸುವ ಬಗ್ಗೆ ಪ್ರಸ್ತಾಪ ಮಂಡನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ವಿರೋಧ ಪಕ್ಷಗಳ ಸದಸ್ಯರಿಂದ ಗದ್ದಲ, ಕೋಲಾಹಲ.
ಪಾಕಿಸ್ತಾನದ ಗಡಿ ಕಾರ್ಯಾಚರಣೆ ತಂಡದ (ಬಿಎಟಿ) ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ಜುಲೈ 31 ರಂದು ದಾಳಿಯಲ್ಲಿ ಮೃತಪಟ್ಟಿದ್ದ ಬಿಎಟಿ ಸಿಬ್ಬಂದಿ ಮತ್ತು ಭಯೋತ್ಪಾದಕರ ಶವಗಳನ್ನು ತೆಗೆದುಕೊಳ್ಳುವಂತೆ ಭಾರತೀಯ ಸೇನೆಯು ನೆರೆಯ ದೇಶವನ್ನು ಕೇಳಿದೆ.
ಯೋಧರ ಸಾವು ದೇಶದಲ್ಲಿ ಭಯೋತ್ಪಾದನೆಯನ್ನು ನಾಶ ಮಾಡಲೇಬೇಕೆಂಬ ಛಲ ಹುಟ್ಟಿಸಿದೆ. ಹೀಗಾಗಿ ಈಗಾಗಲೇ ಭದ್ರತಾ ಪಡೆ ತನ್ನ ಭಾಷೆಯಲ್ಲಿಯೇ ಭಯೋತ್ಪಾದಕರಿಗೆ ಉತ್ತರಿಸಿದೆ ಎಂದು ಮೋದಿ ಹೇಳಿದ್ದಾರೆ.
ಭದ್ರತಾ ಪಡೆಗಳು 6 ಉಗ್ರರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾರ್ಯಾಚರಣೆ ವೇಳೆ ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಘರ್ಷಣೆ ಉಂಟಾಗಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.