ಉಭಯ ರಾಷ್ಟ್ರಗಳ ನಡುವೆ ಅಂಚೆ ಮೇಲ್ ಸೇವೆಯನ್ನು ಏಕಪಕ್ಷೀಯವಾಗಿ ನಿಲ್ಲಿಸಿರುವ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಸೋಮವಾರದಂದು ವಾಗ್ದಾಳಿ ನಡೆಸಿದೆ, ಪಾಕಿಸ್ತಾನದ ಈ ಕ್ರಮವು ಅಂತರರಾಷ್ಟ್ರೀಯ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಭಾರತ ಹೇಳಿದೆ.
ವಾಣಿಜ್ಯ ಸಚಿವಾಲಯವು ವಾಷಿಂಗ್ಟನ್ನೊಂದಿಗಿನ ವ್ಯಾಪಾರ ಒಪ್ಪಂದದ ಬಗ್ಗೆ ಕಾರ್ಯ ನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಾತುಕತೆಗಳನ್ನು ಮುಕ್ತಾಯಗೊಳಿಸುವ ಭರವಸೆಯಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನವದೆಹಲಿಯಲ್ಲಿ ದೀಪಾವಳಿಯಂದು ದಾಳಿ ನಡೆಸುವ ಯೋಜನೆಯೊಂದಿಗೆ ಕನಿಷ್ಠ ಐದು ಭಯೋತ್ಪಾದಕರು ನೇಪಾಳ ಮೂಲಕ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಮೂಲಗಳು ಗುರುವಾರ ತಿಳಿಸಿವೆ.
ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ 275 ರನ್ ಗಳಿಗೆ ಸರ್ವ ಪತನ ಕಂಡಿದೆ. ಆ ಮೂಲಕ ಭಾರತ ತಂಡ ಈಗ 326 ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಇತರ ದೇಶಗಳ ಆರ್ಥಿಕತೆಗಳಲ್ಲಿ ಕಂಡು ಬಂದ ಸುಧಾರಣೆಗಳಿಂದಾಗಿ ಭಾರತ ವಾರ್ಷಿಕ ಜಾಗತಿಕ ಸ್ಪರ್ಧಾತ್ಮಕತೆ ಸೂಚ್ಯಂಕ ಪಟ್ಟಿಯಲ್ಲಿ ಹಿಂದಕ್ಕೆ ಉಳಿದಿದೆ. ಇನ್ನೊಂದೆಡೆಗೆ ಸಿಂಗಾಪುರ್ ಅಮೇರಿಕಾವನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ.
ವಿಶಾಖ್ ಪಟ್ಟಣದ ವೈ.ಎಸ್.ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಎರಡನೇ ಇನಿಂಗ್ಸ್ ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿದೆ.
ವಿಶ್ವದ ಅತಿದೊಡ್ಡ ತೈಲ ರಫ್ತುದಾರರಾದ ಸೌದಿ ಅರೇಬಿಯಾವು ದೇಶದ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ ಪೆಟ್ರೋಕೆಮಿಕಲ್ಸ್, ಮೂಲಸೌಕರ್ಯ ಮತ್ತು ಗಣಿಗಾರಿಕೆ ಕ್ಷೇತ್ರಗಳಲ್ಲಿ ಭಾರತದಲ್ಲಿ 100 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮಾಡಲು ಎದುರು ನೋಡುತ್ತಿದೆ.
ಉಗಾಂಡಾದಲ್ಲಿ ನಡೆದ ಕಾಮನ್ವೆಲ್ತ್ ಪಾರ್ಲಿಮೆಂಟರಿ ಸಮ್ಮೇಳನದಲ್ಲಿ ಕಾಶ್ಮೀರ ವಿಷಯದ ಬಗ್ಗೆ ಪಾಕಿಸ್ತಾನದ ನಿಲುವು ಪ್ರಚಾರದಿಂದ ಕೂಡಿದೆ ಎಂದು ಭಾರತ ತೀವ್ರವಾಗಿ ಟೀಕಿಸಿತು ಮತ್ತು ಮಿಲಿಟರಿ ಆಡಳಿತವು ಪಾಕಿಸ್ತಾನದ ಸಂಪ್ರದಾಯವಾಗಿದೆ ಎಂದು ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಇತ್ತೀಚಿನ ಬೆಳವಣಿಗೆಗಳು ಸಂಪೂರ್ಣವಾಗಿ ಭಾರತಕ್ಕೆ ಆಂತರಿಕ ವಿಷಯವಾಗಿದೆ, ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಎಂದು ಚೀನಾ ಗೌರವಿಸಬೇಕು ಎಂದು ಸರ್ಕಾರ ಹೇಳಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಪಾಕಿಸ್ತಾನದೊಂದಿಗಿನ ಮಾತುಕತೆಯಿಂದ ಭಾರತ ದೂರ ಸರಿಯುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಭಾರತವು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವ ಮುನ್ನ ಪಾಕಿಸ್ತಾನ ತನ್ನ ದೇಶದಲ್ಲಿ ಭಯೋತ್ಪಾದನೆಯನ್ನು ಎದುರಿಸಲು ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದು ಅವರು ಹೇಳಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪಿಎಂ ಮೋದಿ ಈ ಹೇಳಿಕೆ ನೀಡಿದ್ದಾರೆ.
ದೇಶದ ವಿತ್ತ ವ್ಯವಸ್ಥೆ ಪಾತಾಳದಲ್ಲಿ ನೆಲೆ ಕಂಡುಕೊಂಡಿದೆ. ನಿರಂತರವಾಗಿ ಆಗುತ್ತಿರುವ ಉದ್ಯಮ, ಉದ್ಯೋಗ ನಷ್ಟ
ಆರ್ಥಿಕ ಮುಗ್ಗಟ್ಟಿನ ಅತ್ಯಂತ ಅಪಾಯದ ದಿನಗಳ ಮುನ್ಸೂಚನೆ ನೀಡಿವೆ ಎಂದು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.