ಕೊಲ್ಕತ್ತಾದಲ್ಲಿ ಇಂದು ಅಮಿತ್ ಶಾ ಮಮತಾ ಬ್ಯಾನರ್ಜೀ ಅವರು ಮತಕ್ಕಾಗಿ ನುಸುಳುಕೋರರನ್ನು ರಾಜ್ಯದಲ್ಲಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಪಶ್ಚಿಮ ಬಂಗಾಳದಲ್ಲಿ ಒಡೆದಾಳುವ ರಾಜಕಾರಣ ನಡೆಯಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರದಂದು ಬಂಗಾಳದ ಜನರಿಗೆ ತಮ್ಮ ಮೇಲೆ ನಂಬಿಕೆ ಇಡುವಂತೆ ಮನವಿ ಕೊಂಡಿದ್ದಾರೆ. ಎಸ್ಆರ್ಸಿ ವಿಚಾರವಾಗಿ ಮಾತನಾಡಿದ ಅವರು ಅದನ್ನು ಪಶ್ಚಿಮ ಬಂಗಾಳದಲ್ಲಿ ಅನುಮತಿಸುವುದಿಲ್ಲ ಎಂದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರೊಂದಿಗಿನ ಸಭೆಯಲ್ಲಿ ನಾಗರಿಕರ ನೋಂದಣಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ ನಂತರ ಎಚ್ಚೆತ್ತುಕೊಂಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಈಗ ನೂತನ ಅಭಿಯಾನದ ಮೂಲಕ ಜನರ ಒಲವು ಗಳಿಸಿ ಕೊಳ್ಳುವತ್ತ ಮುಂದಾಗಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಹಿನ್ನಲೆಯಲ್ಲಿ ಈಗ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬಿಜೆಪಿ ವಿರುದ್ಧ ಜೊತೆಯಾಗಿ ಹೋರಾಡಲು ಕಾಂಗ್ರೆಸ್ ಮತ್ತು ಸಿಪಿಎಂಗೆ ಮನವಿ ಮಾಡಿದ್ದಾರೆ.
ಕೋಲ್ಕತ್ತಾದ ಉತ್ತರಕ್ಕೆ ಇರುವ ಉತ್ತರ 24 ಪರಗಣ ಜಿಲ್ಲೆಯ ಭಟ್ಪಾರದಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತರ ನಡುವೆ ನಡೆದ ಘರ್ಷಣೆಯಲ್ಲಿ 17 ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲ್ಲಲಾಯಿತು ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಪೊಲೀಸ್ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಕರೆದು ತುರ್ತು ಸಭೆ ನಡೆಸಿದರು.
ಪಶ್ಚಿಮ ಬಂಗಾಳದಲ್ಲಿ ವೈದ್ಯರ ಪ್ರತಿಭಟನೆಯ ದಿನಗಳ ನಂತರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಬೇಡಿಕೆಗಳಿಗೆ ಒಪ್ಪಿಕೊಂಡು ವೈದ್ಯರನ್ನು ಕೆಲಸಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದ್ದಾರೆ'ಸಾವಿರಾರು ಜನರು ವೈದ್ಯಕೀಯ ಚಿಕಿತ್ಸೆಗಾಗಿ ಕಾಯುತ್ತಿದ್ದಾರೆ ಆದ್ದರಿಂದ ಎಲ್ಲ ವೈದ್ಯರು ಕೆಲಸಕ್ಕೆ ಮರಳಬೇಕೆಂದು ಮನವಿ ಮಾಡುತ್ತೇನೆ' ಎಂದು ಮಮತಾ ಹೇಳಿದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತಾದ ಎಸ್.ಕೆ.ಕೆ.ಎಂ ಆಸ್ಪತ್ರೆಯ ಪ್ರತಿಭಟನಾಕಾರರು ತಮ್ಮ ಭೇಟಿಯ ವೇಳೆಯಲ್ಲಿ ತಮ್ಮನ್ನು ನಿಂದಿಸಿದ ವೈಧ್ಯರನ್ನು ಕ್ಷಮಿಸುವುದಾಗಿ ಹೇಳಿದ್ದಾರೆ.
ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿಯೇತರ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತುಎನ್.ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರು ಆಗುವ ಕುರಿತಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಮ್ ದಾಸ್ ಅಥವಾಲೆ ಚುನಾವಣೆ ಫಲಿತಾಂಶದ ನಂತರ ಅವರಿಬ್ಬರಿಗೂ ಈಗ ಮೋದಿ ಎದುರಿಸುವುದು ಕಷ್ಟವಾಗಿರಬಹುದು ಎಂದು ಹೇಳಿದರು.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪರಸ್ಪರ ಟೀಕಾಪ್ರಹಾರ ನಡೆಸಿದ್ದ ಮೋದಿ ಮತ್ತು ಮಮತಾ ಬ್ಯಾನರ್ಜೀ ಈಗ ಅದಕ್ಕೆಲ್ಲ ತಾತ್ಕಾಲಿಕ ವಿರಾಮ ಬಿದ್ದಂತಾಗಿದೆ.ಪ್ರಧಾನಿ ಮೋದಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀಯವರನ್ನು ತಮ್ಮ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಅವರು ಒಪ್ಪಿಗೆ ನೀಡಿ ಬರುವದಾಗಿ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಅವರ ಆಕ್ಷೇಪಣಾ ಚಿತ್ರವನ್ನು ಶೇರ್ ಮಾಡಿರುವ ಹಿನ್ನಲೆಯಲ್ಲಿ ಬಂಧಿಸಲಾಗಿದ್ದ ಬಿಜೆಪಿ ನಾಯಕಿ ಪ್ರಿಯಾಂಕಾ ಶರ್ಮಾ ಅವರಿಗೆ ಸುಪ್ರೀಂಕೋರ್ಟ್ ಈಗ ಕರಾರು ರಹಿತ ಜಾಮೀನು ನೀಡಿದೆ.
ಬಿಜೆಪಿ ಹಾಗೂ ಆರೆಸೆಸ್ಸ್ ಬೆಂಬಲಿಗರು ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಭದ್ರತಾ ಪಡೆಗಳ ವೇಷದಲ್ಲಿ ಪ್ರವೇಶಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೆ ಆರೋಪಿಸಿದ್ದಾರೆ.
ಪ್ರಧಾನಿ ವಿರುದ್ದ ಟೀಕಾ ಪ್ರಹಾರವನ್ನು ಹರಿತಗೊಳಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಮೋದಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಮತ್ತೊಂದು ಕ್ವಿಟ್ ಇಂಡಿಯಾ ರೀತಿಯ ಚಳುವಳಿ ಅಗತ್ಯವೆಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.