Fake Marriages: ಮದುವೆ ಹೆಸರಿನಲ್ಲಿ ಅವಿವಾಹಿತರಿಗೆ ಟೋಪಿ ಹಾಕುತ್ತಿದ್ದ 8 ಜನ ಮಹಿಳೆಯರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಘೋಲಿಯ ಕೇಘ್ನಾಂಡ್ ಫಾಟಾ ನಿವಾಸಿ ಜ್ಯೋತಿ ರವೀಂದ್ರ ಪಾಟೀಲ್(35), ವಿದ್ಯಾ ಸತೀಶ್ ಖಂಡೇಲ್ ಸೇರಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು 4 ದಿನಗಳ ಕಾಲ ಕಸ್ಟಡಿಯಲ್ಲಿರಿಸಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಿದೆ. ಏತನ್ಮಧ್ಯೆ, ಮಹಾರಾಷ್ಟ್ರ ಸರ್ಕಾರ ರಚನೆ ಕುರಿತು ಮಾತನಾಡಿರುವ ಶಿವಸೇನೆಯ ಸಂಜಯ್ ರೌತ್, ನೀವು 'ಹಂಗಾಮ' ಎಂದು ಕರೆಯುತ್ತಿರುವಿರಿ, ವಾಸ್ತವವಾಗಿ ಇದು 'ಹಂಗಾಮ' ಅಲ್ಲ, ನ್ಯಾಯ ಮತ್ತು ಹಕ್ಕುಗಳ ಹೋರಾಟ. ಇದರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಬಿಜೆಪಿ-ಶಿವಸೇನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಏತನ್ಮಧ್ಯೆ, ಸಂಸದ ಸಂಜಯ್ ರೌತ್ ಅವರ ನೇತೃತ್ವದಲ್ಲಿ ಶಿವಸೇನೆ ಮುಖಂಡರು ಇಂದು ಸಂಜೆ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿಯನ್ನು ಭೇಟಿಯಾದರು.
ನವೆಂಬರ್ 7 ರೊಳಗೆ ಹೊಸ ಸರ್ಕಾರವನ್ನು ಪಡೆಯಲು ರಾಜ್ಯವು ವಿಫಲವಾದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗುವುದು ಎಂಬ ಹೇಳಿಕೆಯ ಮೇಲೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಎನ್‌ಸಿಪಿ ನಾಯಕ ನವಾಬ್ ಮಲಿಕ್ ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲಿ ಜನರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಕೇಳಿಕೊಂಡಿದ್ದಾರೆ ಅದನ್ನು ಪಕ್ಷವು ಮಾಡುತ್ತದೆ ಎಂದು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಚಾರವಾಗಿ ಬಿಜೆಪಿ- ಶಿವಸೇನಾ ನಡುವೆ ಮುಸುಕಿನ ಗುದ್ದಾಟ ತಾರಕ್ಕೆರಿದ್ದು, ಈಗ ಶಿವಸೇನಾ ವಕ್ತಾರ ಸಂಜಯ್ ರೌತ್ ಮಹಾರಾಷ್ಟ್ರದಲ್ಲಿ ಯಾವ ದುಶ್ಯಂತ್ ಇಲ್ಲ, ತಮ್ಮ ಪಕ್ಷದ್ದು ಧರ್ಮ ಮತ್ತು ಸತ್ಯದ ರಾಜಕಾರಣ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ 50:50 ಸೂತ್ರದಡಿಯಲ್ಲಿ ಸರ್ಕಾರ ರಚಿಸಬೇಕೆಂದು ಶಿವಸೇನಾ ಆಗ್ರಹಿಸುತ್ತಿರುವುದು ಈಗ ಮೈತ್ರಿಪಕ್ಷಗಳ ನಡುವೆ ಕಗ್ಗಂಟಾಗಿ ಪರಿಣಮಿಸಿದೆ. ಇದೇ ಬೆನ್ನಲ್ಲೇ ಈಗ ಶಿವಸೇನಾ ಮತ್ತು ಬಿಜೆಪಿ ಪ್ರತ್ಯೇಕವಾಗಿ ಇಂದು ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಉದ್ಧವ್ ಠಾಕ್ರೆ ಅವರ ಪಕ್ಷವು ರಾಜ್ಯ ಸರ್ಕಾರವನ್ನು ನಡೆಸುವ ಅನುಭವವನ್ನು ಹೊಂದಿರುವುದರಿಂದ ಮಹಾರಾಷ್ಟ್ರದ ಮೈತ್ರಿಕೂಟದಲ್ಲಿ ಶಿವಸೇನೆ 50:50 ಸೂತ್ರದ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.
ಶಿವಸೇನೆ ಶುಕ್ರವಾರ 50-50 ಹಂಚಿಕೆ ಸೂತ್ರದ ಬಗ್ಗೆ ಭಾರತೀಯ ಜನತಾ ಪಕ್ಷದಿಂದ ಲಿಖಿತ ಆಶ್ವಾಸನೆ ಕೋರಿದೆ. ಇದರ ಅನ್ವಯ ಮಹಾರಾಷ್ಟ್ರದಲ್ಲಿ 2.5 ವರ್ಷಗಳ ಕಾಲ ಶಿವಸೇನೆ ಸಿಎಂ ಇರಬೇಕು ಎಂದು ಹೇಳಿದೆ.
ಮಹಾರಾಷ್ಟ್ರದಲ್ಲಿ 15 ಸ್ವತಂತ್ರ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಬಿಜೆಪಿ ಮತ್ತು ಶಿವಸೇನೆಯಿಂದ ಬಂಡಾಯ ಎದ್ದವರು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಚುನಾವಣಾ ಫಲಿತಾಂಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪಕ್ಷವನ್ನು ಅಭಿನಂದಿಸಿದ್ದಾರೆ, ಈ ದಿನಗಳಲ್ಲಿ ಒಂದು ಪಕ್ಷವು ಒಂದು ರಾಜ್ಯದಲ್ಲಿ ಸತತ ಅಧಿಕಾರವನ್ನು ಪಡೆಯುವುದು ಸಾಧಾರಣ ಸಾಧನೆಯಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷದ ಪ್ರದರ್ಶನದಿಂದ ಉತ್ತೇಜಿತರಾಗಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗಿನ ಭೇಟಿಯಲ್ಲಿ ಮಾಡಿ 50:50 ಒಪ್ಪಂದವನ್ನು ಬಿಜೆಪಿ ಗೌರವಿಸಬೇಕೆಂದು ಒತ್ತಾಯಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.