ಕಳೆದ ಮೂರು ದಿನಗಳಿಂದ ಗುಲ್ಬರ್ಗ-ರಾಯಚೂರು ಪ್ರವಾಸದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಫುಡ್ ಪಾಯ್ಸನ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ.
ಐಟಿ ಇಲಾಖೆಗೆ ಯಡಿಯೂರಪ್ಪ ಬರೆದ ಪತ್ರ ಬಹಿರಂಗವಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುಲ್ ಗರಂ ಆಗಿದ್ದಾರೆ ಎಂದು ತಿಳಿದು ಬಂದಿದೆ. ಎರಡು ದಿನಗಳ ಕಾಲ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಿಮಿತ್ತ ದೆಹಲಿಗೆ ಆಗಮಿಸಿದ್ದ ಯಡಿಯೂರಪ್ಪನವರಿಗೆ ಈ ವಿಚಾರವಾಗಿ ಅಮಿತ್ ಶಾ ಪುಲ್ ಕ್ಲಾಸ್ ತಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿಯಾಗುವ ವಿಚಾರದಲ್ಲಿ ನಾನು ಹಗಲುಗನಸು ಕಾಣುತ್ತಿದ್ದೆನೆಯೋ ಅಥವಾ ಸಿದ್ದರಾಮಯ್ಯನವರು ಕಾಣುತ್ತಿದ್ದಾರೋ ಎನ್ನುವುದು ಸದ್ಯದಲ್ಲಿ ತಿಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಹೊಂದಲು ಬೆಂಬಲ ವ್ಯಕ್ತಪಡಿಸಿದ್ದು, ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿಯೂ ಕಾಂಗ್ರೆಸ್ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.