ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ಕೆಲಸಕ್ಕೆ ಮುಂದಾಗಬೇಡಿ. ಇಂತಹ ಸಾವಿರ ಆರೋಪ ಬಂದರೂ ಅದನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯ ನನಗೆ ಜನ್ಮತಃ ಬಂದಿದೆ- ಟೀಕಾಕಾರರಿಗೆ ಸದನದಲ್ಲಿ ಸ್ಪೀಕರ್ ಉತ್ತರ
ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಸದ್ಯದ ಪರಿಸ್ಥಿತಿಯಲ್ಲಿ ಅಂಗೀಕರಿಸಲು ಸಾಧ್ಯವಿಲ್ಲ. ರಾಜೀನಾಮೆ ಅಂಗೀಕಾರಕ್ಕೆ ಅದರದ್ದೇ ಆದ ನಿಯಮಗಳಿವೆ. ಅದರಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ವಿಧಾನಸೌಧಕ್ಕೆ ಆಗಮಿಸುವ ವೇಳೆಗೆ ಸಮಯ 6 ಗಂಟೆ ಮೀರಿದ್ದ ಹಿನ್ನೆಲೆಯಲ್ಲಿ ಬಸ್ ಇಳಿಯುತ್ತಿದ್ದಂತೆ ಶಾಸಕ ಬೈರತಿ ಬಸವರಾಜು ಸೇರಿದಂತೆ ಇತರ ಶಾಸಕರು ಸಮಯ ಮೀರಿದ್ದರಿಂದ ಓಡೋಡಿ ಸ್ಪೀಕರ್ ಕಚೇರಿ ತಲುಪಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಶಾಸಕರ ರಾಜೀನಾಮೆಗೆ ಸಂಬಂಧಪಟ್ಟಂತೆ ರಾಜ್ಯಪಾಲರೂ ನನಗೆ ಪತ್ರ ಬರೆದಿದ್ದು, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಉತ್ತರಿಸಿದ್ದೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ಡಿ ತಿಳಿಸಿದ್ದಾರೆ.
ಒಂದು ಕಾಲದಲ್ಲಿ ವಿಧಾನ ಸಭೆಯ ಪಡಸಾಲೆಯಲ್ಲಿ ಹಿರಿಯ ಪತ್ರಕರ್ತರ ಮುಂದೆ ಕುಳಿತು ಕೊಳ್ಳಲು ನಮಗೆ ಭಯವಾಗುತ್ತಿತ್ತು. ಈಗಲೂ ಭಯವಾಗುತ್ತದೆ. ಆದರೆ, ಕಾರಣ ಬೇರೆ ! ಭ್ರಷ್ಟಾಚಾರವು ಇಂದು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಮಾಧ್ಯಮ ಕ್ಷೇತ್ರವನ್ನೂ ವ್ಯಾಪಿಸಿದೆ. ರಾಜಕಾರಣಿಗಳಿಗಿಂತಲೂ ಮಾಧ್ಯಮ ಕ್ಷೇತ್ರದಲ್ಲಿ ಹೆಚ್ಚು ಶ್ರೀಮಂತರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.