Lok Sabha Election Result 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 242 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಗೆ ಸರಳ ಬಹುಮತ ಸಿಕ್ಕಿಲ್ಲ. ಹೀಗಾಗಿ ಮಿತ್ರಪಕ್ಷಗಳ ಜೊತೆಗೆ ಮೈತ್ರಿ ನಿಭಾಯಿಸುವುದು ಕಷ್ಟವಾಗಲಿದೆ. ವಿಶೇಷವಾಗಿ ಜೆಡಿಯುನ ನಿತೀಶ್ ಕುಮಾರ್ ಮತ್ತು ಟಿಡಿಪಿಯ ಚಂದ್ರಬಾಬು ನಾಯ್ಡು ಜೊತೆಗೆ ಹೊಂದಾಣಿಕೆ ಕಷ್ಟವೆಂದು ಹೇಳಲಾಗುತ್ತಿದೆ.
Lok Sabha Elections: ಲೋಕಸಭಾ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಸೋಲುತ್ತಾರೆ. ಹೀಗಾಗಿಯೇ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡುತ್ತಿದ್ದಾರೆ ಅಂತಾ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Opposition Meeting In Bengaluru: ವಿಧಾನ ಸೌಧ ದಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಗೆ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ.
Fake News: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್ನ್ಯೂಸ್ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ನಾಳೆ ಏಳನೇ ಹಾಗೂ ಅಂತಿಮ ಅಂತದ ಲೋಕಸಭಾ ಚುನಾವಣೆ ತೆರೆಬಿಳಲಿದೆ. ಪ್ರಧಾನಿ ನರೇಂದ್ರ ಮೋದಿಯವರ ವಾರಾಣಸಿ ಕ್ಷೇತ್ರ ಸೇರಿದಂತೆ 59 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.ಮೋದಿ ಈಗ ಎರಡನೇ ಬಾರಿಗೆ ಈ ಕ್ಷೇತ್ರವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.
ಇಂದು ಗುಜರಾತಿನ ಸುರೇಂದ್ರನಗರದಲ್ಲಿ ನಡೆದ ಜನ ಆಕ್ರೋಶ್ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಮಾತನಾಡುತ್ತಿದ್ದ ವೇಳೆ ಅವರ ಕೆನ್ನೆಗೆ ತರುಣ್ ಗಜ್ಜರ್ ಎನ್ನುವ ವ್ಯಕ್ತಿ ಬಾರಿಸಿದ್ದಾನೆ.ಈಗ ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ತಮಿಳುನಾಡಿನ ವೆಲ್ಲೂರು ಸಂಸದೀಯ ಕ್ಷೇತ್ರದ ಲೋಕಸಭಾ ಚುನಾವಣೆಯನ್ನು ರದ್ದುಪಡಿಸಲು ಕೋರಿ ಚುನಾವಣಾ ಆಯೋಗವು ಎಪ್ರಿಲ್ 14 ರಂದು ಸಲ್ಲಿಸಿದ್ದ ಶಿಫಾರಸ್ಸುಗಳನ್ನು ರಾಷ್ಟ್ರಪತಿಗಳು ಸ್ವೀಕರಿಸಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಅಮೇಥಿ ಜೊತೆಗೆ ಕೇರಳದ ವಾಯ್ನಾಡ್ ನಿಂದಲೂ ಸ್ಪರ್ಧಿಸಲಿದ್ದಾರೆ ಎಂದು ಭಾನುವಾರ ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸುಮಾರು 90,000 ಕೋಟಿ ರೂಪಾಯಿಗಳಷ್ಟು ಖರ್ಚು ಮಾಡಬಹುದೆಂದು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅಭಿಪ್ರಾಯಪಟ್ಟಿದ್ದಾರೆ.
ನವದೆಹಲಿ: ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಹಣ ಬಳಕೆ ತಡೆಗೆ ಉನ್ನತ ಸಮಿತಿಯೊಂದನ್ನು ರಚನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಈ ಸುದ್ದಿ ಮೂಲಗಳ ಪ್ರಕಾರ ಹಣಕಾಸು ಸೇವೆಗಳ ಸದಸ್ಯರು ಮತ್ತು ರಕ್ಷಣಾ ಏಜೆನ್ಸಿಗಳ ಸದಸ್ಯರು ಉನ್ನತ ಸಮಿತಿಯ ಭಾಗವಾಗಿರಲಿದ್ದಾರೆ ಎನ್ನಲಾಗಿದೆ.
ಈ ಉನ್ನತ ಸಮಿತಿಯನ್ನು ಚುನಾವಣಾ ಬೌದ್ದಿಕತೆಯ ಬಹು ಇಲಾಖೆ ಎಂದು ಕರೆಯಲಾಗಿದೆ. ಇದರಲ್ಲಿ ಕೇಂದ್ರೀಯ ನೇರ ತೆರಿಗೆ ಬೋರ್ಡ್ ನ ಅಧಿಕಾರಿಗಳು, ಪರೋಕ್ಷ ತೆರಿಗೆ ಅಧಿಕಾರಿಗಳು, ಜಾರಿ ನಿರ್ದೇಶನಾಲಯ, ಕಂದಾಯ ನಿರ್ದೇಶನಾಲಯ, ,ಕೇಂದ್ರೀಯ ಆರ್ಥಿಕ ಗುಪ್ತಚರ ದಳ ಮತ್ತು ಆರ್ಥಿಕ ಗುಪ್ತಚರ ಘಟಕಗಳು ಕೂಡ ಒಳಗೊಳ್ಳಲಿವೆ ಎನ್ನಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ಮುಂದಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಈಗ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮುಂಬರುವ 2019 ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ದಿನಾಂಕಗಳು ವೈರಲ್ ಆಗಿದ್ದು, ಈಗ ಅದು ಫೆಸ್ ಬುಕ್ ನಿಂದ ಹಿಡಿದು ವಾಟ್ಸಪ್ ನಲ್ಲಿಯೂ ಕೂಡ ಶೇರ್ ಮಾಡಲಾಗುತ್ತಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಜೆಡಿ (ಯು) ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಎಲ್ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.