ಬೆಂಗಳೂರಿನ ವಿಧಾನಸೌಧ ಆವರಣದಲ್ಲಿರುವ ದೇವರಾಜ್ ಅರಸು ಪ್ರತಿಮೆ ಮುಂಭಾಗದಲ್ಲಿ ಔರಾದ್ಕರ್ ಸಮಿತಿ ವರದಿ ಜಾರಿಮಾಡುವಂತೆ ಒತ್ತಾಯಿಸಿ ಪೊಲೀಸ್ ಸಮವಸ್ತ್ರ ಧರಿಸಿ ವಾಟಾಳ್ ಪ್ರತಿಭಟನೆ ನಡೆಸಿದರು.
ಫೆಬ್ರವರಿ 19ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆ ಹೊರಟು ಉಗ್ರರ ದಾಳಿಯನ್ನು ಖಂಡಿಸಲಾಗುವುದು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ತಮಿಳುನಾಡಿನ ನಡೆಯನ್ನು ವಿರೋಧಿಸಿ, ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಒತ್ತಾಯಿಸಿ ಜನವರಿ 12ರಂದು ಬೆಳಿಗ್ಗೆ 11.30ಕ್ಕೆ ಅತ್ತಿಬೆಲೆ ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಜ.28ರಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜನವರಿ 25ರಂದು ಬೃಹತ್ ಪ್ರತಿಭಟನೆ ಮತ್ತು ಬಂದ್ ಹಮ್ಮಿಕೊಳ್ಳುವುದರೊಂದಿಗೆ ಮೋದಿ ಅವರಿಗೆ ಕಪ್ಪುಬಾವುಟ ಪ್ರದರ್ಶಿಸಲು ನಿರ್ಧರಿಸಲಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಮುನ್ನ ದಿನವಾದ ಜನವರಿ 27ರಂದು ಬೃಹತ್ ಪ್ರತಿಭಟನೆ ಮತ್ತು ಬಂದ್ ಹಮ್ಮಿಕೊಳ್ಳುತ್ತಿರುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿ ಬಳಿ ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸುತ್ತಿರುವ ಮಹದಾಯಿ ಹೋರಾಟಗಾರರಿಗೆ ಬೆಂಬಲ ವ್ಯಕ್ತಪಡಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕಳಸಾ-ಬಂಡೂರಿ ರಾಜಕೀಯ ಸ್ವರೂಪ ಪಡೆಯುತ್ತಿರುವುದನ್ನು ಖಂಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.