ಹರಿಯಾಣದಲ್ಲಿ ಸ್ವಂತವಾಗಿ ಸ್ಪರ್ಧಿಸುವುದು ಅಕಾಲಿ ದಳದ ನಿರ್ಧಾರವಾಗಿತ್ತು. ಆದರೆ ಪಂಜಾಬ್ ಉಪಚುನಾವಣೆಯಲ್ಲಿ ನಮ್ಮ ಮೈತ್ರಿ ಮುಂದುವರಿಯಲಿದೆ ಎಂದು ಪಂಜಾಬ್‌ನ ಬಿಜೆಪಿ ಘಟಕದ ಅಧ್ಯಕ್ಷ ಶ್ವೇತ್ ಮಲಿಕ್ ಶುಕ್ರವಾರ ಹೇಳಿದ್ದಾರೆ.
ಶಿರೋಮಣಿ ಅಕಾಲಿ ದಳ ತ್ಯಜಿಸಿದ ನಂತರ ಪಂಜಾಬ್ ಸಂಸದ ಶೇರ್ ಸಿಂಗ್ ಘುಬಾಯ ಅವರು ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಉಪಸ್ಥಿತಿಯಲ್ಲಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.