ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಮರಾಠಿಗರು ಕರ್ನಾಟಕ ಬಸ್ಗಳ ಮೇಲೆ ಕಲ್ಲು ತೂರಾಟ ಸೇರಿ ಕನ್ನಡ ವಿರೋಧಿ ಭಾವನೆ ವ್ಯಕ್ತಪಡಿಸಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರದ ರಾಜಕೀಯ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಿದೆ. ಏತನ್ಮಧ್ಯೆ, ಮಹಾರಾಷ್ಟ್ರ ಸರ್ಕಾರ ರಚನೆ ಕುರಿತು ಮಾತನಾಡಿರುವ ಶಿವಸೇನೆಯ ಸಂಜಯ್ ರೌತ್, ನೀವು 'ಹಂಗಾಮ' ಎಂದು ಕರೆಯುತ್ತಿರುವಿರಿ, ವಾಸ್ತವವಾಗಿ ಇದು 'ಹಂಗಾಮ' ಅಲ್ಲ, ನ್ಯಾಯ ಮತ್ತು ಹಕ್ಕುಗಳ ಹೋರಾಟ. ಇದರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಬಿಜೆಪಿ-ಶಿವಸೇನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಏತನ್ಮಧ್ಯೆ, ಸಂಸದ ಸಂಜಯ್ ರೌತ್ ಅವರ ನೇತೃತ್ವದಲ್ಲಿ ಶಿವಸೇನೆ ಮುಖಂಡರು ಇಂದು ಸಂಜೆ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿಯನ್ನು ಭೇಟಿಯಾದರು.
ಜೀ ಮೀಡಿಯಾದ ಚಾನೆಲ್ 24 ತಾಸ್ನ ಡೆಬಿಟ್ ಶೋನಲ್ಲಿ, ಕಾಕಡೆ ಅವರು ಶಿವಸೇನೆಯ 56 ಶಾಸಕರಲ್ಲಿ 45 ಮಂದಿ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಬಿಜೆಪಿಗೆ ಬೆಂಬಲ ನೀಡಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ಉದ್ಧವ್ ಠಾಕ್ರೆ ಅವರ ಪಕ್ಷವು ರಾಜ್ಯ ಸರ್ಕಾರವನ್ನು ನಡೆಸುವ ಅನುಭವವನ್ನು ಹೊಂದಿರುವುದರಿಂದ ಮಹಾರಾಷ್ಟ್ರದ ಮೈತ್ರಿಕೂಟದಲ್ಲಿ ಶಿವಸೇನೆ 50:50 ಸೂತ್ರದ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.
ಶಿವಸೇನೆ ಶುಕ್ರವಾರ 50-50 ಹಂಚಿಕೆ ಸೂತ್ರದ ಬಗ್ಗೆ ಭಾರತೀಯ ಜನತಾ ಪಕ್ಷದಿಂದ ಲಿಖಿತ ಆಶ್ವಾಸನೆ ಕೋರಿದೆ. ಇದರ ಅನ್ವಯ ಮಹಾರಾಷ್ಟ್ರದಲ್ಲಿ 2.5 ವರ್ಷಗಳ ಕಾಲ ಶಿವಸೇನೆ ಸಿಎಂ ಇರಬೇಕು ಎಂದು ಹೇಳಿದೆ.
ಒಂದು ತಿಂಗಳಿಗಿಂತಲೂ ಕಡಿಮೆ ಇರುವ ವಿಧಾನಸಭಾ ಚುನಾವಣೆಗೆ ಈಗ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ವಿಳಂಬದ ಮಧ್ಯೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಅವರೊಂದಿಗಿನ ಮಾತುಕತೆ ಉತ್ತಮವಾಗಿ ಪ್ರಗತಿಯಲ್ಲಿದೆ ಮತ್ತು ಶೀಘ್ರದಲ್ಲೇ ಅಂತಿಮ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019(Maharashtra Assembly Elections 2019) ರಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವೆ ಸ್ಥಾನ ಹಂಚಿಕೆ ಮತ್ತು ಮೈತ್ರಿ ಕುರಿತು ಒಪ್ಪಂದ ಬಹುತೇಕ ಅಂತಿಮ ಘಟ್ಟ ತಲುಪಿದೆ.
ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಎರಡು ದಿನಗಳಲ್ಲಿ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿವಸೇನೆ ಮುಖ್ಯಸ್ಥರು ಹೇಳಿದರು.
ಬುಧವಾರ, ಮಹಾರಾಷ್ಟ್ರ ಸರ್ಕಾರದ ಸಚಿವರಾಗಿರುವ ಶಿವಸೇನೆ ನಾಯಕ ರೌಟೆ, ಬಿಜೆಪಿಯಿಂದ ಸಮಾನ ಸಂಖ್ಯೆಯ ಸ್ಥಾನಗಳನ್ನು ನೀಡದಿದ್ದರೆ ಶಿವಸೇನೆ ಮತ್ತು ಬಿಜೆಪಿ ನಡುವಿನ ಚುನಾವಣಾ ಪೂರ್ವ ಮೈತ್ರಿ ಮುರಿಯಬಹುದು ಎಂದು ಹೇಳಿಕೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.