ರಾಂಪುರದ ತಮ್ಮ ವಿಶ್ವವಿದ್ಯಾಲಯಕ್ಕೆ ರೈತರ ಭೂಮಿಯನ್ನು ಕಸಿದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮುಖಂಡ ಮತ್ತು ಲೋಕಸಭಾ ಸಂಸದ ಅಜಮ್ ಖಾನ್ ವಿರುದ್ಧ ಕಳೆದ ಒಂದು ತಿಂಗಳಲ್ಲಿ 27 ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಉತ್ತರಪ್ರದೇಶದ ಪ್ರಮುಖ ಗುಜ್ಜರ್ ನಾಯಕ ಸುರೇಂದ್ರ ಸಿಂಗ್ ನಗರ್ ಅವರು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ.
"ನನ್ನ ಉದ್ದೇಶ ಉಪ ಸಭಾಪತಿ ಅವರಿಗೆ ಅಗೌರವಗೊಳಿಸುವುದಾಗಿರಲಿಲ್ಲ. ನನ್ನ ಮಾತಿನಿಂದ ಇತರರ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಅದಕ್ಕೆ ಕ್ಷಮೆಯಾಚಿಸುತ್ತೇನೆ" ಎಂದು ಅಜಂ ಖಾನ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ಬಿಜೆಪಿ ಬೆಂಬಲಿಸುವವರ ಅಂಗಡಿಗಳಿಂದ ಸಾಮಾನುಗಳ ಖರೀದಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕೈರಾನಾ ಮತ್ತು ಅಲ್ಲಿನ ಸಮೀಪದ ಗ್ರಾಮಗಳ ಜನರಿಗೆ ಒತ್ತಾಯಿಸುತ್ತಿರುವುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿದೆ.
ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿರುವ ಶೇಖರ್ ಅವರ ರಾಜೀನಾಮೆಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇ 31ರಂದು ಮಧ್ಯಾಹ್ನ 12.30ಕ್ಕೆ ಗೌತಮ್ ಬುದ್ಧನಗರ್ ಜಿಲ್ಲೆಯ ಸಮಾಜವಾದಿ ಪಕ್ಷದ ದಾದ್ರಿ ಅಸೆಂಬ್ಲಿ ವಿಭಾಗದ ಅಧ್ಯಕ್ಷರಾಗಿದ್ದ ರಾಮ್ತೆಕ್ ಕಟಾರಿಯಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಗೋರಖ್ಪುರದಲ್ಲಿ ಸಾಮಾಜವಾದಿ ಪಕ್ಷದ(ಎಸ್ಪಿ) ಅಭ್ಯರ್ಥಿಯನ್ನು ಸೋಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ ಎಂದು ಮೇ 16 ರಂದು ಅಖಿಲೇಶ್ ಯಾದವ್ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಪತ್ರವನ್ನು ಕಳುಹಿಸಿದ್ದಾರೆ ಎಂದು ಎಸ್ಪಿ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ "ಈ ಅರ್ಜಿಯಲ್ಲಿ ವಿಚಾರಣೆಗೆ ಅಗತ್ಯವಾದ ಯಾವುದೇ ಅರ್ಹತೆಯಿಲ್ಲ" ಎಂದು ಹೇಳಿ, ಅರ್ಜಿಯನ್ನು ವಜಾಗೊಳಿಸಿದೆ.
ಅಜಂಗಢ ಕ್ಷೇತ್ರದ ಬಗ್ಗೆ ಮಾತನಾಡಿದ ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಈ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಕಂಡಿದೆ. ಹಾಗಾಗಿ ಈ ಕ್ಷೇತ್ರದಲ್ಲಿ ಎಸ್ಪಿ ಸಾಕಷ್ಟು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
ಅಖಿಲೇಶ್ ತಂದೆ ಮುಲಾಯಂ ಸಿಂಗ್ ಯಾದವ್ 2014ರ ಲೋಕಸಭೆ ಚುನಾವಣೆಯಲ್ಲಿ ಆಜಂಗಢ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇದೀಗ ತಂದೆಯ ಕ್ಷೇತ್ರದಲ್ಲಿ ಮಗ ಅಖಿಲೇಶ್ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿದ್ದು, ಮೊದಲ ಜಂಟಿ ರ್ಯಾಲಿ ಏಪ್ರಿಲ್ 7ರಂದು ಮುಸ್ಲಿಂ ಸಮುದಾಯದ ಪ್ರಧಾನವಾಗಿರುವ ಸಹರಾನ್ಪುರದ ದೇವಬಂದ್ನಲ್ಲಿ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.