ಸೋಮವಾರ ಕಾಂಗ್ರೆಸ್ ದಿಢೀರನೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದರಿಂದ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ.
ನ್ಯಾಯಮೂರ್ತಿ ಶರದ್ ಅರವಿಂದ್ ಬಾಬ್ಡೆ ಅವರನ್ನು ಸುಪ್ರೀಂಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಮಾಡುವ ಆದೇಶಕ್ಕೆ ರಾಷ್ಟಪತಿ ರಾಮ್ ನಾಥ್ ಕೋವಿಂದ್ ಮಂಗಳವಾರ ಸಹಿ ಹಾಕಿದ್ದಾರೆ.
ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮೂರು ದಿನ ವಿಸ್ತೃತವಾಗಿ ವಿಚಾರಣೆ ನಡೆಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಆನಂದ್ ಸಿಂಗ್ ಪರ ಸಜ್ಜನ್ ಪೂವಯ್ಯ, ಶ್ರೀಮಂತ ಪಾಟೀಲ್ ಮತ್ತು ಆರ್. ಶಂಕರ್ ಪರ ಗಿರಿ ವಾದ ಮಾಡಿದರು.
370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಬಂಧ ಇನ್ನೂ ಎಷ್ಟು ದಿನಗಳ ಕಾಲ ಮುಂದುವರೆಯಲಿದೆ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಬುಧವಾರ ಕಾಂಗ್ರೆಸ್ ಪರ ಕಪಿಲ್ ಸಿಬಲ್ ಮತ್ತು ಅನರ್ಹ ಶಾಸಕರ ಪರ ಮುಕುಲ್ ರೋಹಟಗಿ ವಾದ ಮಂಡಿಸಿದರು.
ಮುಂಬಯಿಯ ಆರೆ ಕಾಲೋನಿಯಲ್ಲಿ ವಿವಾದಾತ್ಮಕ ಮೆಟ್ರೋ ಕಾರ್ ಶೆಡ್ ಯೋಜನೆಯನ್ನು ಮುಂದುವರಿಯಲಿದೆ, ಆದರೆ ಮರ ಕಡಿಯುವಿಕೆಯ ಸ್ಥಗಿತವಾಗಿರಲಿದೆ ಎಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ನ್ಯಾಯಾಲಯವು ಈ ವಿಷಯದ ಬಗ್ಗೆ ಶ್ವೇತಪತ್ರವನ್ನು ಕೇಳಿದೆ, ಮತ್ತು ಮರಗಳನ್ನು ಕಡಿದು, ಕಸಿ ಮಾಡಿದ ಮತ್ತು ಕಸಿ ಬದುಕುಳಿದ ಬಗ್ಗೆ ವಿವರಗಳನ್ನು ಕೋರಿತು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಮತ್ತು ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರಿದ್ದ ತ್ರಿಸದಸ್ಯ ಪೀಠ, ಅರ್ಜಿದಾರರಿಗೆ ಹೈಕೋರ್ಟ್ಗೆ ಹೋಗುವಂತೆ ಸಲಹೆ ನೀಡಿ, ಅರ್ಜಿಯನ್ನು ವಜಾ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಗೊಗೊಯ್ ಅವರು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಬರೆದಿರುವ ಪತ್ರದಲ್ಲಿ, ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಅವರನ್ನು ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಜಾಮೀನು ಅರ್ಜಿ, ಪಿಎಂಸಿ ಬ್ಯಾಂಕಿನಲ್ಲಿ ಹಣ ವಿತ್ ಡ್ರಾ ನಿಷೇಧ, ಅಸ್ಸಾಂನಲ್ಲಿ ಎನ್ಆರ್ ಸಿ ಜಾರಿ, ಸಂತ ರವಿದಾಸ್ ದೇವಾಲಯ ನೆಲಸಮ ಸೇರಿದಂತೆ ನಾಲ್ಕು ಪ್ರಮುಖ ಪ್ರಕರಣಗಳನ್ನು ಶುಕ್ರವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
ಅಯೋಧ್ಯಾ ಮಧ್ಯಸ್ಥಿಕೆ ಸಮಿತಿ ಸುಪ್ರೀಂ ಕೋರ್ಟ್ನಲ್ಲಿ ಒಪ್ಪಿಗೆ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ವಿವಾದಿತ ಭೂಮಿ ಬದಲಿಗೆ ಬೇರೆಡೆ ಭೂಮಿ ಪಡೆಯಲು ಸುನ್ನಿ ವಕ್ಫ್ ಮಂಡಳಿ ಸಮ್ಮತಿಸಿದೆ. ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ 1947 ರ ಸ್ಥಾನಮಾನವನ್ನು ಕಾಯ್ದುಕೊಳ್ಳುವುದಾಗಿಯೂ ಅವರು ಹೇಳಿದ್ದಾರೆ. ಅನೇಕ ಪ್ರಮುಖ ಹಿಂದೂ ಮತ್ತು ಮುಸ್ಲಿಂ ಪಕ್ಷಗಳು ಈ ಚರ್ಚೆಯಲ್ಲಿ ಭಾಗವಹಿಸಲಿಲ್ಲ.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಅಶೋಕ್ ಭೂಷಣ್ ಅವರಿದ್ದ ನ್ಯಾಯಪೀಠವು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಮುಂದಿನ ವಿಚಾರಣೆಯನ್ನು ಅ.21ಕ್ಕೆ ನಡೆಸುವುದಾಗಿ ತಿಳಿಸಿದೆ.
ಅಕ್ಟೋಬರ್ 17 ರೊಳಗೆ ಅಯೋಧ್ಯೆಯಲ್ಲಿ ರಾಜಕೀಯವಾಗಿ ಸೂಕ್ಷ್ಮವಾಗಿರುವ ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಮುಕ್ತಾಯಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.
ಎಸ್ಸಿ / ಎಸ್ಟಿ ಕಾಯ್ದೆಯ ನಿಬಂಧನೆಗಳನ್ನು ದುರ್ಬಲಗೊಳಿಸುವ 2018 ರ ಆದೇಶದ ವಿರುದ್ಧ ಕೇಂದ್ರದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿಸಿದೆ, ಇದು ಇದು ಶಾಸಕಾಂಗದ ವ್ಯಾಪ್ತಿಯಲ್ಲಿ ಬರುವ ಕಾರಣ ನ್ಯಾಯಾಲಯವು ಮಾರ್ಗಸೂಚಿಗಳನ್ನು ರೂಪಿಸಬಾರದು ಎಂದು ಹೇಳಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತತೆ ಮತ್ತು ವಿಶೇಷ ಸ್ಥಾನಮಾನವನ್ನು ನೀಡಿರುವ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಸ್ಪಂದಿಸಲು ಸುಪ್ರೀಂಕೋರ್ಟ್ ಮಂಗಳವಾರದಂದು ಕೇಂದ್ರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.