ಭಾರತವನ್ನು ಜಗತ್ತಿನ ನಿರಾಶ್ರಿತರ ರಾಜಧಾನಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಶುಕ್ರವಾರದ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ರಾಷ್ಟ್ರೀಯ ನಾಗರಿಕ ನೋಂದಣಿ ವಿಸ್ತರಿಸುವ ವಿಚಾರವಾಗಿ ಮನವಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಗೆ ತಿಳಿಸಿದೆ.
1992 ರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರಿಗೆ 9 ತಿಂಗಳೊಳಗಾಗಿ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಶುಕ್ರವಾರದಂದು ಆದೇಶಿಸಿದೆ.ಈ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಶಿ ಮತ್ತು ಉಮಾ ಭಾರತಿಯಂತಹ ಘಟಾನುಘಟಿಗಳು ಭಾಗಿಯಾಗಿದ್ದಾರೆ.
ಸ್ವ-ಇಚ್ಛೆ ಮತ್ತು ಸತ್ಯ ಎರಡೇ ರಾಜೀನಾಮೆ ಅಂಗೀಕಾರಕ್ಕೆ ಪ್ರಮುಖ ಮಾನದಂಡವಾಗಿದ್ದು, ಕಲಂ 191/2ರ ಪ್ರಕಾರ ರಾಜೀನಾಮೆ ನೀಡುವುದು ಶಾಸಕರ ಹಕ್ಕಾಗಿದೆ. ಶಾಸಕರ ಹಕ್ಕನ್ನು ಸ್ಪೀಕರ್ ತಡೆಯುವಂತಿಲ್ಲ ಎಂದು ಮುಕುಲ್ ರೋಹ್ಟಗಿ ತಮ್ಮ ವಾದ ಮಂಡಿಸಿದರು.
ಆರು ವಾರಗಳ ಬೇಸಿಗೆ ರಜೆಯ ನಂತರ ಜುಲೈ 1 ರಂದು ಪುನರಾರಂಭಗೊಳ್ಳುವ ಸುಪ್ರೀಂಕೋರ್ಟ್ ಅಯೋಧ್ಯಾ ಭೂ ವಿವಾದ, ರಫೇಲ್ ಪ್ರಕರಣಗಳನ್ನು ಮತ್ತೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ 31 ನ್ಯಾಯಾಧೀಶರನ್ನು ಒಳಗೊಂಡ ಸುಪ್ರೀಂಕೋರ್ಟ್ ರಫೇಲ್ ಪ್ರಕರಣದ ಪರಿಶೀಲನಾ ಮನವಿಯಲ್ಲಿ ತನ್ನ ತೀರ್ಪನ್ನು ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರಾದ ಅಮಿತ್ ಷಾ ಮತ್ತು ಸ್ಮೃತಿ ಇರಾನ್ ಅವರಿಂದ ತೆರವಾದ ರಾಜ್ಯಸಭಾ ಸ್ಥಾನಗಳಿಗೆ ಏಕಕಾಲದಲ್ಲಿ ಉಪಚುನಾವಣೆ ನಡೆಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.
ಮೆದುಳು ಜ್ವರದಿಂದ 160ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿರುವ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಯಾದ ಬೆನ್ನಲ್ಲೇ ಈ ಬಗ್ಗೆ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ, ಬಿಹಾರ ಮತ್ತು ಉತ್ತರಪ್ರದೇಶ ಸರ್ಕಾರಗಳಿಗೆ ನೊಟೀಸ್ ಜಾರಿ ಮಾಡಿದ್ದು, ಒಂದು ವಾರದೊಳಗೆ ಮಕ್ಕಳ ಸಾವಿನ ಕುರಿತಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ನಾಲ್ವರು ನ್ಯಾಯಾಧೀಶರ ಹೆಸರನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.ಸದ್ಯ 27 ನ್ಯಾಯಾಧೀಶರನ್ನು ಒಳಗೊಂಡಿರುವ ಸುಪ್ರೀಂಕೋರ್ಟ್ ಈ ನಾಲ್ವರ ನೇಮಕಕ್ಕೆ ಅಧಿಕೃತ ಮುದ್ರೆ ಬಿದ್ದರೆ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ 31 ಸದಸ್ಯರನ್ನು ಒಳಗೊಳ್ಳಲಿದೆ ಎನ್ನಲಾಗಿದೆ.
ಇವಿಎಂ ಮತಗಳ ಜೊತೆಗೆ ಶೇ.100 ವಿವಿಪ್ಯಾಟ್ ಹೊಂದಾಣಿಕೆ ಕೋರಿ ತಂತ್ರಜ್ಞರ ತಂಡವೊಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯದ ರಜಾ ಕಾಲದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.