ಮೊದಲಿಗೆ ನನ್ನ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಹೇಳಿದ ಸುಮಲತಾ ಅವರು, ಬಳಿಕ ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಂಡ್ಯದ ರೈತರು ಮತ್ತು ನೀರಿನ ಸಮಸ್ಯೆಗಳನ್ನು ವಿವರಿಸುತ್ತಾ ಗಮನ ಸೆಳೆದರು.
ಇಪ್ಪತ್ತು ವರ್ಷಗಳ ಹಿಂದೆ ಅಂಬರೀಶ್ ಸಂಸದರಾದಾಗ ಸಂಸತ್ತಿಗೆ ಬಂದಿದ್ದೆ. ಗ್ಯಾಲರಿಯಲ್ಲಿ ಕೂತು ಅಂಬರೀಶ್ ಪ್ರಮಾಣ ವಚನ ಸ್ವೀಕರಿಸುವುದನ್ನು ನೋಡಿದ್ದೆ. ನಾನು ಕೂಡ ಹೀಗೆ ಒಂದು ದಿನ ಪ್ರಮಾಣ ವಚನ ಸ್ವೀಕರಿಸುತ್ತೇನೆ ಅಂತಾ ಕನಸಿನಲ್ಲೂ ಅಂದುಕೊಂಡಿರಲಿಲ್ಲ.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರವಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವಂಗತ ನಟ ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಗುರುವಾರ ರಾತ್ರಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿಯಲ್ಲಿ ಸುಮಲತಾ ಪರ ಪರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಶಿವರಾಮೇಗೌಡ ಅವರು ಕೋಮು ದ್ವೇಷ ಹರಡುವ ಹಾಗೂ ಜಾತಿ ಸಂಘರ್ಷ ಉಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕಬ್ಬಾಳಯ್ಯ ಬುಧವಾರ ಚುನಾವಣಾಧಿಕಾರಿಗೆ ದೂರು ನೀಡಿದ್ದರು.
ಸುಮಲತಾ ನಿಜಕ್ಕೂ ಒಕ್ಕಲಿಗರಾ? ಹಾಗೆ ಹೀಗೆ, ಅಂತೆಲ್ಲಾ ಕೆಲವರು ಮಾತನಾಡಿದ್ದಾರೆ. ಆದರೆ, ನಾನು ಆ ಲೆವೆಲ್ ಗೆ ಹೋಗಲ್ಲ. ಇನ್ನೇನು ಹದಿನೇಳು ದಿನಗಳಲ್ಲಿ ಜನರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸುಮಲತಾ ಹೇಳಿದರು.
ನಮ್ಮ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದ್ದು, ಗುಪ್ತಚರ ಇಲಾಖೆ ಅಧಿಕಾರಿಗಳು ತಮ್ಮ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಸುಮಲತಾ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.