ನೂತನವಾಗಿ ಮಧ್ಯಪ್ರದೇಶದ ವಿಧಾನಸಭೆಗೆ ಆಯ್ಕೆಯಾಗಿರುವ 230 ಶಾಸಕರಲ್ಲಿ ಒಟ್ಟು187 ಶಾಸಕರು ಕೊಟ್ಯಾಧಿಪತಿಗಳಾಗಿದ್ದಾರೆ ಎಂದು ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮೋಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ಸಮೀಕ್ಷೆ ತಿಳಿಸಿದೆ. ಇದರಲ್ಲಿ ಶೇ 41 ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಕೇಸ್ಗಳಿವೆ ಎಂದು ವರದಿ ಹೇಳಿದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಡ್ ದಲ್ಲಿನ ವಿಧಾನಸಭಾ ಫಲಿತಾಂಶ ಬದಲಾವಣೆಗೆ ಮುನ್ನುಡಿ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.ಇದು ಬಿಜೆಪಿ ನೇತೃತ್ವದ ಸರಕಾರದ ನೀತಿಗಳನ್ನು ಜನರು ನಿರಾಕರಿಸಿದ್ದಾರೆ ಎಂದು ಹೇಳಿದರು.
ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಮುಂಬರುವ 2019ರ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ.ಆದರೆ ಕೇವಲ ಚುನಾವಣಾ ರಾಜಕಾರಣಕ್ಕೆ ಮಾತ್ರ ಗುಡ್ ಬಾಯಿ ಹೇಳುತ್ತಿದ್ದು ಆದರೆ ರಾಜಕೀಯದಲ್ಲಿ ಕ್ರಿಯಾಶೀಲವಾಗಿರುವುದರಾಗಿ ತಿಳಿಸಿದ್ದಾರೆ. ಆದರೆ ಇದಕ್ಕೆ ಬಿಜೆಪಿ ಪಕ್ಷದಿಂದ ಒಪ್ಪಿಗೆ ಪಡೆಯಬೇಕಾಗಿದೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ಮುಖಂಡರನ್ನು ಗುರುವಾರ ಸಂಜೆ ರಾಷ್ಟ್ರೀಯ ರಾಜಧಾನಿಯಲ್ಲಿ ಭೇಟಿಯಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.