Basavaraj Bommai : ನಾವು ಇನ್ನು ಮುಂದೆ ಅಂಬೇಡ್ಕರ್ ಅವರನ್ನೂ ಮಹಾತ್ಮಾ ಅಂಬೇಡ್ಕರ್ ಎಂದು ಕರೆಯಬೇಕು. ಸಂವಿಧಾನದ ಮಾರ್ಗದಲ್ಲಿ ನಡೆಯುವುದೇ ನಾವು ದೇಶಕ್ಕೆ ಕೊಡುವ ಗೌರವ. ಚುನಾವಣೆ ಬಂದೆ ಬರುತ್ತವೆ. ಸಂವಿಧಾನ, ಅಂಬೇಡ್ಕರ್ ವಿಚಾರದಲ್ಲಿ ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Loksabha election 2024: ಡಾ.ಬಿ.ಆರ್.ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ಪ್ರಧಾನಿ ಮೋದಿಯವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿದರು.
CM Siddaramaiah: ಬೆಂಗಳೂರಿನಲ್ಲಿ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಯ ಬಗ್ಗೆ ಪುನ: ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಈ ಮುಂಚೆ ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ ಎಂದರು.
CM Siddaramaiah: ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. "ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ" ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಅವರಿಗೆ ಇದೆ ಎನ್ನುವುದು ಸ್ಪಷ್ಟ.
ಇಂದು ದೇಶದ ಪ್ರಜಾಪ್ರಭುತ್ವ ಎದುರಿಸುತ್ತಿರುವ ಎಲ್ಲ ಸವಾಲುಗಳಿಗೆ ಬಾಬಾ ಸಾಹೇಬರು ರಚಿಸಿದ ನಮ್ಮ ಸಂವಿಧಾನದಲ್ಲಿ ಪರಿಹಾರವಿದೆ. ಅಂಬೇಡ್ಕರ್ ಅವರ ಆಲೋಚನೆಗಳು ಮತ್ತು ಅವರು ಹಾಕಿಕೊಟ್ಟ ಮಾರ್ಗ ಪ್ರತಿಯೊಬ್ಬರಿಗೂ ಸ್ಪೂರ್ತಿ ನೀಡುತ್ತಲೇ ಇರಲಿವೆ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ ಮತ್ತು ಸಂವಿಧಾನಕ್ಕೆ ಬದ್ಧರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಮಾಜವಾದದಲ್ಲಿ ನಂಬಿಕೆಯುಳ್ಳ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ತತ್ವದಡಿಯಲ್ಲಿ ನಂಬಿಕೆಯಿರಿಸಿದ್ದು ಹಲವು ಹೊಸ ಯೋಜನೆಗಳ ಮೂಲಕ ನಾಡಿನ ಸರ್ವತೋಮುಖ ಅಭಿವೃದ್ದಿಗೆ ವಿಶೇಷ ಗಮನ ಹರಿಸಿದೆ.
ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರʼ
ʻಕಾಂಗ್ರೆಸ್ದು ಎಸ್ಡಿಪಿಐ, ಪಿ ಎಫ್ಐ ಬೆಂಬಲಿಸುವ ನೀತಿʼ
ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ
ಹಿಂದೂ ಬಹು ಸಂಖ್ಯಾತನಾದ್ರೆ, ಭಾರತ ಉಳಿಯುತ್ತೆ
ಇಲ್ಲ ಅಂದ್ರೆ ಭಾರತ, ಸಂವಿಧಾನ ಉಳಿಯುವುದಿಲ್ಲ
2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.
ಇಂದು ಡಾ: ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು.
ಜಾತಿ ಜನಗಣತಿ ವರದಿ ಮೂಲ ಪ್ರತಿ ನಾಪತ್ತೆ ವಿಚಾರ
ಮೂಲ ಪ್ರತಿ ಕಳ್ಳತನವಾಗಿದ್ರೆ ಎಲ್ಲಿದೆ ಎಂದು ಹುಡುಕಬೇಕು
ಬೆಳಗಾವಿಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ
ಜಾತಿ ಸಮೀಕ್ಷೆಯ ಹಾರ್ಡ್ ಕಾಪಿ ಕಂಪ್ಯೂಟರ್ನಲ್ಲಿರುತ್ತದೆ
ಕಂಪ್ಯೂಟರ್ನಲ್ಲಿರೋದನ್ನ ಕಳ್ಳತನ ಮಾಡಲು ಆಗಲ್ವಲ್ಲಾ..?
ಸಂವಿಧಾನ ಪ್ರಕಾರ ಜಾತಿ ಗಣತಿ ವರದಿ ಜಾರಿ ಮಾಡಲು ಬರಲ್ಲ
Preamble of Constitution: ದೇಶದಲ್ಲಿ ಸನಾತನ ಧರ್ಮ ಮತ್ತು ಹಿಂದುತ್ವದ ವಿಷಯಗಳ ಬಗ್ಗೆ ಕೇಂದ್ರವು ಆಕ್ರಮಣಕಾರಿಯಾಗಿ ಮುನ್ನಡೆಯುತ್ತಿರುವ ಸಮಯದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
Karnataka MLA Training: ರಾಜಕಾರಣ ಇರುವುದು ಜನರ ಸೇವೆಗಾಗಿಯೇ ಹೊರತು ಧಿಮಾಕು ತೋರಿಸಲು ಅಲ್ಲ. ರಾಜಕಾರಣಿ ಜನರ ಸೇವಕ. ಇದು ಮನಸ್ಸಿನಲ್ಲಿ ಇದ್ರೆ ಮಾತ್ರ ಸಾರ್ವಜನಿಕ ಕ್ಷೇತ್ರದಲ್ಲಿ ಉಳಿಯಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು. ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿಯನ್ನು ಹೋಗಲಾಡಿಸಲು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
Muslim Reservation: ನಾಂದೇಡ್ ರ್ಯಾಲಿ ಉದ್ದೇಶಿಸಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಮಾತನ್ನು ಹೇಳಿದ್ದಾರೆ, ಸಂವಿಧಾನಕ್ಕೆ ವಿರುದ್ಧವಾಗಿರುವ ಮುಸ್ಲಿಂ ಮೀಸಲಾತಿ ಬೇಡ ಎಂಬುದು ಬಿಜೆಪಿಯ ಭಾವನೆಯಾಗಿದೆ ಎಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.