High Court order for CT Ravi release: ಈ ಕುರಿತಾಗಿ ತಮ್ಮ ವಿರುದ್ಧ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಮತ್ತು ತನ್ನನ್ನು ಅಕ್ರಮವಾಗಿ ಬಂಧಿಸಿ, ಕಾನೂನುಬಾಹಿರವಾಗಿ ನಡೆದುಕೊಂಡಿರುವುದರಿಂದ ತಕ್ಷಣ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಸಿಟಿ ರವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಡಿಗ್ಯಾಂಗ್ ತಂಡದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ - ಇಂದು ದರ್ಶನ್ ಸೇರಿ 7 ಆರೋಪಿಗಳ ಬೇಲ್ ಭವಿಷ್ಯ - ಹೈಕೋರ್ಟ್ ಆದೇಶದ ಕಡೆ ದಾಸನ ಅಭಿಮಾನಿಗಳ ಚಿತ್ತ
ಇಂದು ದರ್ಶನ್ ಜಾಮೀನು ಅರ್ಜಿ ಭವಿಷ್ಯ
ಇಂದು ಆದೇಶ ಪ್ರಕಟಿಸಲಿರುವ ಹೈಕೋರ್ಟ್
ಮಧ್ಯಾಹ್ನ 2:30ಕ್ಕೆ ಕೋರ್ಟ್ನಿಂದ ಆದೇಶ
ಈಗಾಗಲೇ ಮಧ್ಯಂತರ ಬೇಲ್ ನೀಡಿರುವ ಹೈಕೋರ್ಟ್
MUDA Scam: ಇ.ಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ
ನಳಿನ್ ಕುಮಾರ್ ಕಟೀಲ್ ಅರ್ಜಿ ಪುರಸ್ಕರಿಸಿ ಕೇಸ್ ರದ್ದು
ದೂರಿನಲ್ಲಿ ಐಪಿಸಿ ಸೆ. 383 ಅಡಿ ಸುಲಿಗೆಯ ಅಂಶಗಳಿಲ್ಲ
ದೂರುದಾರರಿಗೆ ಹಣ ವಸೂಲು ಮಾಡಿದ ಆರೋಪವಿಲ್ಲ
ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ನಿಗದಿಪಡಿಸಿದೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗವಾರ ನಡೆಸಿತು.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಕೇಸ್
ಇಂದು ಸಿಬಿಐ ತನಿಖೆ ರಿಟ್ ಅರ್ಜಿ ವಿಚಾರಣೆ
ಹೈಕೋರ್ಟ್ನಲ್ಲಿ ಸ್ನೇಹಮಯಿ ಅರ್ಜಿ ವಿಚಾರಣೆ
ಈಗಾಗಲೇ ಸಿಬಿಐಗೆ ನೋಟಿಸ್ ನೀಡಿರುವ ಕೋರ್ಟ್
CBI ತನಿಖೆ ವ್ಯಾಪ್ತಿ ಸೂಚಿಸುವಂತೆ ನೋಟಿಸ್
ರಿಟ್ ಅರ್ಜಿ ವಿಚಾರಣೆ ಮುಂದೂಡುವಂತೆ ಮನವಿ
ಸಿದ್ದರಾಮಯ್ಯ ಪರ ವಕೀಲರಿಂದ ಮನವಿ ಸಾಧ್ಯತೆ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ವಿಚಾರಣೆಗೆ ಬರಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
ವಿಮ್ಸ್ ವೈದ್ಯರ ವರದಿ ಆಧರಿಸಿ ಹೈಕೋರ್ಟ್ ತೀರ್ಪು
131 ದಿನ ಬಳಿಕ ದರ್ಶನ್ಗೆ ಸಿಗಲಿದೆಯಾ ಬಿಡುಗಡೆ ಭಾಗ್ಯ..?
ಇಂದು ಬೆಳಗ್ಗೆ 10:30ಕ್ಕೆ ಜಾಮೀನು ಅರ್ಜಿ ಆದೇಶ
ನ್ಯಾಯಮೂರ್ತಿ, ವಿಶವಜಿತ್ ಶೆಟ್ಟಿ ಅವರಿಂದ ಆದೇಶ
ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಕೋರ್ಟ್
Darshan Stroke: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವ ದಾಸನ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆದ್ಯಾವಾಗ ಜೈಲಿನಿಂದ ಹೊರಬರುತ್ತಾರೆ ಎಂದು ಎದುರು ನೋಡುತ್ತಿದ್ದಾರೆ.
Karnataka high court judgement: ಈಗ ಜೈ ಶ್ರೀರಾಂ ಘೋಷಣೆ ಕೂಗಿದವರು ಮುಂದೆ ನ್ಯಾಯಾಲಯದ ಇದೇ ತೀರ್ಪಿನಿಂದ ಪ್ರಚೋದನೆಗೊಂಡು ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಬಹುದು ಇಲ್ಲವೇ ಭಜನೆಯನ್ನೇ ಮಾಡಬಹುದು. ಆಗ ಉಂಟಾಗುವ ಧಾರ್ಮಿಕ ಗಲಭೆಗಳಿಗೆ ನ್ಯಾಯಾಲಯವೇ ಪ್ರಚೋದನೆ ಕೊಟ್ಟಂತೆ ಆಗುತ್ತದಲ್ಲವೇ?
ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್ಗೆ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಮಂಗಳವಾರ ವಜಾಗೊಳಿಸಿತ್ತು.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ ನಂತರ ಅವರು ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.
MUDA Scam: ತಮ್ಮ ವಿರುದ್ಧ ಬಂದಿರುವ ತೀರ್ಪಿನ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ʼನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಡಿ ಇಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.
Muda Scam: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಬಿಗ್ ಶಾಕ್ ಉಂಟಾಗಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್, ಸಿದ್ದರಾಮಯ್ಯರ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಇದೀಗ ಸಿಎಂ ಸಿದ್ದರಾಮಯ್ಯರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.