ಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. “ಯಾರನ್ನೆಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.
ಮೋದಿ ತಾಯಿ ಬಗ್ಗೆ ಮುನಿರತ್ನ ಮಾತನಾಡಿದಾಗ ಅದನ್ನು ಸಹಿಸಿಕೊಳ್ಳುವ ಶಕ್ತಿ ಬಿಜೆಪಿಯವರಿಗೆ ಇರಬಹುದು. ಆದರೆ ನಾವು ಸಹಿಸಲ್ಲ. ನಾವು ಪ್ರಧಾನಿ ಮೋದಿ ಅವರ ಬಗ್ಗೆ ಟೀಕೆ, ಟಿಪ್ಪಣಿ ಮಾಡಿದರೂ ಅವರಿಗೆ ಅವರ ಸ್ಥಾನಕ್ಕೆ ನೀಡಬೇಕಾದ ಗೌರವ ನೀಡುತ್ತೇವೆ. ಅವರ ತಾಯಿಯನ್ನೂ ಗೌರವಿಸುತ್ತೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
ಚಾಮರಾಜನಗರ: ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದ ಮೂಗೂರು ಕ್ರಾಸ್ ನಲ್ಲಿ ಮಾಧ್ಯಮದವರೊಂದಿಗೆ ಅವರು, ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು. ಯತ್ನಾಳ್ ತಮ್ಮ ತೀಟೆಗಾಗಿ ಆ ರೀತಿ ಮಾತನಾಡುತ್ತಿದ್ದಾರೆ. ನಮ್ಮದೆಲ್ಲ ಮಾನವ ಜಾತಿ, ಯತ್ನಾಳ್ ಗೆ ಮಾತನಾಡುವ ತೀಟೆ, ಮಾತನಾಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು ಎಂದರು.
ಬೆಂಗಳೂರಿನ ಆಸ್ತಿಗಳನ್ನು ಹೊಸ ತಂತ್ರಜ್ಞಾನದ ಮೂಲಕ ಮ್ಯಾಪಿಂಗ್ ಕೆಲಸ ಮಾಡುತ್ತಿದೆ. ಒಂದಷ್ಟು ಆಸ್ತಿ ವ್ಯಾಜ್ಯಗಳು ನ್ಯಾಯಾಲಯದಲ್ಲಿವೆ. ಒತ್ತುವರಿಯ ಬಗ್ಗೆ ನಿಮ್ಮ ಬಳಿ ನಿರ್ದಿಷ್ಟ ದಾಖಲೆಗಳು ಇದ್ದರೆ ಈಗಲೇ ಕೊಡಿ, ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸಚಿವ ಸಹೋದ್ಯೋಗಿ ಮುನಿರತ್ನ ಅವರು ನಿರ್ಮಿಸುತ್ತಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
40% Commission Case: ಡಿ.ಕೆಂಪಣ್ಣ ವಿರುದ್ಧ ಸಚಿವ ಮುನಿರತ್ನ ಅವರು ಮಾನಹಾನಿ ಕೇಸ್ ಹಾಕಿದ್ದರು. ಕೋರ್ಟ್ಗೆ ಗೈರಾಗಿದ್ದ ಡಿ.ಕೆಂಪಣ್ಣ ವಿರುದ್ಧ ವಾರೆಂಟ್ ಜಾರಿಯಾಗಿತ್ತು. 8ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.