ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಸಿಂಧೆ ನೇಮಕವಾಗಿರುವ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಆದಿತ್ಯ ಠಾಕ್ರೆ 'ಪಕ್ಷದಲ್ಲಿ ಹೆಚ್ಚಿನ ಆಕಾಂಕ್ಷೆಯನ್ನು ಹೊಂದಿರುವ ಜನರು ಇದ್ದಾರೆ ಎನ್ನುವುದು ನನಗೆ ಮತ್ತು ನಮ್ಮ ತಂದೆಗೆ ತಿಳಿದಿತ್ತು ಎಂದು ಅವರು ಹೇಳಿದರು.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಂಡಾಯಗಾರರಿಗೆ ಪಕ್ಷ ತೊರೆದು ಚುನಾವಣೆ ಎದುರಿಸಲು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಸವಾಲು ಹಾಕಿದ್ದಾರೆ.
ಮಹಾರಾಷ್ಟ್ರ ಕ್ಯಾಬಿನೆಟ್ ಮಂತ್ರಿ ಆದಿತ್ಯ ಠಾಕ್ರೆ ಅವರಿಗೆ ಕೊರೊನಾವೈರಸ್ ಧೃಢಪಟ್ಟಿದೆ. ಇಂದು ಟ್ವೀಟ್ ನಲ್ಲಿ, ತನ್ನೊಂದಿಗೆ ಸಂಪರ್ಕಕ್ಕೆ ಬಂದವರಿಗೆ ವೈರಸ್ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸಿದರು.
ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ಪುತ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಬಳಿಕ ಮೌನ ಮುರಿದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿರುವ ಆದಿತ್ಯ ಠಾಕ್ರೆ ಸದ್ಯ ತಮ್ಮ ಮೌನ ಮುರಿದಿದ್ದಾರೆ.
ಎಐಎಂಐಎಂ ನಾಯಕ ವಾರಿಸ್ ಪಠಾಣ್ ಅವರು ಮಾಡಿದ ಕೋಮುವಾದಿ ಹೇಳಿಕೆ ಕುರಿತು ಶಿವಸೇನೆಯ ಮೌನವನ್ನು ಪ್ರಶ್ನಿಸಿದ ಬಿಜೆಪಿಯ ಹಿರಿಯ ಮುಖಂಡ ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು ಬಳೆಗಳನ್ನು ಧರಿಸಿರಬಹುದು, ಆದರೆ ಬಿಜೆಪಿ ಈ ವಿಷಯದಲ್ಲಿ ಮೌನವಾಗಿರುವುದಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಪುತ್ರ ಆದಿತ್ಯ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಷ್ಟ್ರ ರಾಜಧಾನಿ ದೆಹಲಿಯ ಪ್ರಧಾನಿ ಕಚೇರಿಯಲ್ಲಿ ಭೇಟಿ ಮಾಡಿದರು.
ಮುಂಬೈಯಲ್ಲಿ ರಾತ್ರಿಯಿಡೀ ಮಾಲ್ಗಳು ಮತ್ತು ತಿನಿಸುಗಳು ತೆರೆದಿರಲು ಉದ್ಧವ್ ಠಾಕ್ರೆ ಕ್ಯಾಬಿನೆಟ್ ಬುಧವಾರ ನಿರ್ಧರಿಸಿದೆ. ಈ ಕ್ರಮವು ಜನವರಿ 27 ರಿಂದ ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ ಆಯ್ದ ವಸತಿ ರಹಿತ ಪ್ರದೇಶಗಳಲ್ಲಿನ ಅಂಗಡಿಗಳನ್ನು ಮುಕ್ತವಾಗಿರಿಸಲಾಗುತ್ತದೆ.
ಆದಿತ್ಯ ಠಾಕ್ರೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಇಬ್ಬರನ್ನೂ ಭೇಟಿಯಾಗಿ, ಅವರ ತಂದೆ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನಿಸಿದರು.
ಮುಂಬರುವ ವಿಧಾನಸಭೆಯಲ್ಲಿ ಶಿವಸೇನಾ ಪಕ್ಷವು ಯುವ ಘಟಕದ ಮುಖ್ಯಸ್ಥ ಆದಿತ್ಯ ಠಾಕ್ರೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಸುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.