ಇನ್ನೂ ಕಾಡುಗೋಡಿಯ ರೆಡ್ರಿನ್ಹೋ ಪಬ್ ನಲ್ಲಿಯೂ ಇದೇ ಕಥೆಯಾಗಿದ್ದು "ರಾತ್ರಿ ಒಂದು ಗಂಟೆಯ ನಂತರ ಜೋರಾಗಿ ಡಿ.ಜೆ ಮ್ಯೂಸಿಕ್ ಹಾಕಲಾಗುತ್ತಿದೆ. ಎಷ್ಟು ಬಾರಿ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ" ಎಂದು ಜಯಶ್ರೀ ಶುಕ್ಲಾ ಎಂಬುವವರು ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ಗೆ ಚಾಕು ಇರಿತ ಘಟನೆಯನ್ನು ಮಾಜಿ ಸಚಿವ ಈಶ್ವರಪ್ಪ ಖಂಡಿಸಿದ್ದಾರೆ. ಮುಸ್ಲಿಂ ಗೂಂಡಾಗಳು ಚಾಕು ಇರಿದಿದ್ದಾರೆ. ಸಾವರ್ಕರ್ಗೂ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಗ್ಗಾನ್ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪ್ರೇಮ್ ಸಿಂಗ್ ಆರೋಗ್ಯ ವಿಚಾರಿದ್ದಾರೆ.. ಇದೇ ವೇಳೆ ಮಾತನಾಡಿದ ಆರಗ, ದುಷ್ಟರನ್ನು ಆದಷ್ಟು ಬೇಗ ಹೆಡೆಮುರಿ ಕಟ್ಟಿ ಕಾನೂನು ಕ್ರಮ ಕೈಗೊಳ್ಳೋದಾಗಿ ಹೇಳಿದ್ದಾರೆ
ಸಿದ್ದರಾಮಯ್ಯ ಸರ್ಕಾರದ ಹೊಲಸು, ದುರ್ನಾತದ ದಾಖಲೆ ಕೊಡಬಲ್ಲೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ವಿಕಾಸಸೌಧದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು.
ನಾಗರೀಕತೆ ಬೆಳೆದಂತೆ ಸಭ್ಯ ಸಮಾಜಕ್ಕೆ ಒದಗಿಸಬೇಕಾದ ಮೂಲಭೂತ ಸೌಕರ್ಯ ಕೊರತೆ ಜಿಲ್ಲೆಯಲ್ಲಿ ಎದ್ದು ಕಾಣಿಸುತ್ತಿದೆ. ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೂ ಸುಸೂತ್ರ ಜಾಗವಿಲ್ಲದೇ ಪರದಾಡುವಂತಾಗಿದ್ದು, ಮಳೆಯ ನಡುವೆ ಟಾರ್ಪಲ್ ಹಾಕಿಕೊಂಡು ಚಿತೆಗೆ ಬೆಂಕಿ ಇಟ್ಟ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ- ನುಗ್ಗೆ ಸೊಪ್ಪಿನ ಸೇವನೆಯಿಂದ ಬಗೆಹರಿಯುತ್ತದೆ ಈ ಎಲ್ಲಾ ಸಮಸ್ಯೆಗಳು
ಗೃಹ ಸಚಿವ ಆರಗ ಜ್ಞಾನೇಂದ್ರರ ಸ್ವಗ್ರಾಮ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಪತಿ ಎದುರೇ ದಲಿತ ಮಹಿಳೆಯನ್ನ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ ಕಾರಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರರ ಸ್ವಗ್ರಾಮ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಪತಿ ಎದುರೇ ದಲಿತ ಮಹಿಳೆಯನ್ನ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ ಕಾರಿದ್ದಾರೆ.
ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
- ಸಂವಿಧಾನದ ವಿರುದ್ಧ ಬಿಜೆಪಿ, ಮಂತ್ರಿಗಳು, ಸಂಘಪರಿವಾರದ ಸದಸ್ಯರು ಷಡ್ಯಂತ್ರ ಮಾಡುವುದನ್ನ ನೋಡುತ್ತಿದ್ದೇವೆ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದಾಳಿ ನಡಸುತ್ತಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮಂತ್ರಿಗಳಿಂದ ಶಾಂತಿ ಸುವ್ಯವಸ್ಥೆಗೆ ಭಂಗ ತರುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷನಾಯಕ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ.
ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ? ಅಂತಾ ಎಚ್ ಡಿಕೆ ಪ್ರಶ್ನಿಸಿದ್ದಾರೆ.
ಪೊಲೀಸರು ಅಪರಾಧಿಗಳನ್ನು ಮೊದಲು ಬಂಧಿಸಿ ಕೂಲಂಕುಷವಾಗಿ ತನಿಖೆ ಮಾಡಲಿ. ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಶಿಕ್ಷೆಗೆ ಒಳಪಡಿಸಲಿ ಅಂತಾ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.