ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ zomoto, Swiggy, Uber, ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/- ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು.ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ, ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಹತ್ತು ದಿನಗಳ ಉಚಿತ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಟಲ್ ಇನ್ನೋವೇಶನ್ ಮಿಷನ್ ಸಹಭಾಗಿತ್ವದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು MyGov ನೀತಿ ಆಯೋಗ್ ಭಾರತೀಯ ಟೆಕ್ ಉದ್ಯಮಿಗಳು ಮತ್ತು ಸ್ಟಾರ್ಟ್ಅಪ್ಗಳಿಗಾಗಿ ಡಿಜಿಟಲ್ ಇಂಡಿಯಾ ಆತ್ಮ ನಿರ್ಭರ್ ಭಾರತ್ ಆಪ್ ಇನ್ನೋವೇಶನ್ ಚಾಲೆಂಜ್ ಘೋಷಿಸಿದ್ದಾರೆ.
ಚೀನಾದ ಸರಕುಗಳನ್ನು ಬಹಿಷ್ಕರಿಸುವ ಕುರಿತಂತೆ ಹೆಚ್ಚಾಗುತ್ತಿರುವ ಬೇಡಿಕೆಗಳ ಹಿನ್ನೆಲೆ ಸರ್ಕಾರ ಕೂಡ ಚೀನಾದಿಂದ ಆಮದು ಕಡಿಮೆ ಮಾಡಲು ದೊಡ್ಡ ಯೋಜನೆಗಳನ್ನು ರೂಪಿಸುತ್ತಿದೆ. ಚೀನಾದಿಂದ ಆಮದಾಗುತ್ತಿರುವ ಸರಕುಗಳ ಮೇಲೆ ಕಸ್ಟಮ್ ಸುಂಕವನ್ನು ಹೆಚ್ಚಿಸಲು ಇದೀಗ ಸರ್ಕಾರ ಚಿಂತನೆ ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.