Gujarat : ಗುಜರಾತ್ ವಿಧಾನಸಭೆಯ ಹೊಸ 40 ಶಾಸಕರ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿವೆ. ಈ 40 ಮಂದಿಯ ಪೈಕಿ 29 ಮಂದಿಯ ವಿರುದ್ಧ ಕೊಲೆ, ಅತ್ಯಾಚಾರದಂತಹ ಗಂಭೀರ ಪ್ರಕರಣಗಳು ದಾಖಲಾಗಿವೆ.
ರಾಜಕೀಯ ಪಕ್ಷಗಳ ಆಸ್ತಿಗಳ ಕುರಿತು ಎಡಿಆರ್ ವರದಿ ಬಹಿರಂಗವಾಗಿದೆ. ದೇಶದ 7 ಪ್ರಮುಖ ರಾಷ್ಟ್ರೀಯ ರಾಜಕೀಯ ಪಕ್ಷಗಳು ಮತ್ತು 44 ಪ್ರಾದೇಶಿಕ ಪಕ್ಷಗಳು ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿವೆ.
ನೂತನವಾಗಿ ರಚನೆಯಾಗಿರುವ ಕೇಂದ್ರದ ಸಚಿವ ಸಂಪುಟದಲ್ಲಿ ಶೇ 42 ರಷ್ಟು ಸಚಿವರು ಕ್ರಿಮಿನಲ್ ಹಿನ್ನಲೆಯನ್ನು ಹೊಂದಿದ್ದಾರೆ ಎನ್ನಲಾಗಿದೆ.ಒಟ್ಟು 78 ಜನರ ಸಚಿವ ಸಂಪುಟದಲ್ಲಿ ನೂತನವಾಗಿ 36 ಜನರನ್ನು ಹೊಸದಾಗಿ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದೆ. ಇದರಲ್ಲಿ 33 ಸಚಿವರ (ಶೇ 42) ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯ ಪ್ರಕಾರ, ಬಿಜೆಪಿ 2016-17 ರಿಂದ 2017-18ರ ನಡುವೆ ಕಾರ್ಪೊರೇಟ್ ದೇಣಿಗೆಯಾಗಿ 915.596 ಕೋಟಿ ರೂ ಸ್ವೀಕರಿಸಿದರೆ. ಮತ್ತೊಂದೆಡೆ, ಕಾಂಗ್ರೆಸ್ ಇದೇ ಅವಧಿಯಲ್ಲಿ ಕೇವಲ 55.36 ಕೋಟಿ ರೂ.ದೇಣಿಗೆಯಾಗಿ ಸ್ವೀಕರಿಸಿದೆ ಎಂದು ತಿಳಿದು ಬಂದಿದೆ.
ಪ್ರಧಾನ ಮಂತ್ರಿ ಮೋದಿಯವರ ನೂತನ ಸಚಿವ ಸಂಪುಟದಲ್ಲಿನ 22 ಸಚಿವರು ತಮ್ಮ ವಿರುದ್ದ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿಕೊಂಡಿದ್ದಾರೆ ಎಂದು ಚುನಾವಣೆ ವಾಚ್ ಡಾಗ್ ಎಂದು ಕರೆಯಲಾಗುವ ಅಸೋಸಿಯೇಷನ್ ಫಾರ್ ಡೆಮೋಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ಎನ್ನುವ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.