ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇಕಡಾ 50% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಅಥವಾ ವಿಜ್ಞಾನೇತರ ವಿಭಾಗದಲ್ಲಿ ಶೇಕಡಾ 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ ವಿಷಯಲ್ಲಿ ಶೇಕಡಾ 50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ.
ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿಎಸ್ ಹಟ್ಟಪ್ಪ ಅವರು ತಿಳಿಸಿದ್ದಾರೆ.