ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೃಷಿ ನವೋದ್ಯಮ ಹೊಸ ಯೋಜನೆ ಜಾರಿಗೊಳಿಸುತ್ತಿದ್ದು, ಇದಕ್ಕಾಗಿ ಗರಿಷ್ಠ 20 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ ಯೋಜನೆಯಡಿ ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.