ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಹಿ ಹಾಕಿದ್ದಾರೆ, ಅದರ ವಿರುದ್ಧ ರೈತರು ವಿಶೇಷವಾಗಿ ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆದಿತ್ತು.
Agriculture Law Repeal Bill 2021 : ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೇ ಈ ಕಾನೂನುಗಳ ವಾಪಸಾತಿಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ನವೆಂಬರ್ 29 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ.
ಕೇಂದ್ರ ಸರಕಾರ ಜಾರಿಮಾಡಲು ಹೊರಟಿರುವ ರೈತ ಮತ್ತು ಕಾರ್ಮಿಕ ಕಾನೂನುಗಳಿಂದ ಭಾರತದ ಭವಿಷ್ಯ ಕರಾಳವಾಗಲಿದೆ ಹೀಗಾಗಿ ಈ ರೈತ ಹಾಗೂ ಕಾರ್ಮಿಕ ನೀತಿಗಳನ್ನು ಹಿಮ್ಮೆಟ್ಟಿಸುವುದು ಇವತ್ತಿನ ತುರ್ತಾಗಿದೆ ಎಂದು ಸಿ.ಐ.ಟಿ.ಯು ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಅಭಿಪ್ರಾಯಪಟ್ಟರು.
ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧದ ಯೋಜಿತ ಉಪವಾಸ ಸತ್ಯಾಗ್ರಹವನ್ನು ರದ್ದುಪಡಿಸಿದ್ದಾರೆ.ಬಿಜೆಪಿಯ ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಅವರು ಇಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.