ಉತ್ತರಪ್ರದೇಶದ ಅಮೇಥಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಬೊಲೆರೋ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಲ್ಲಿ 6 ಮಂದಿ ಸಾವನ್ನಪ್ಪಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ನಗರದ ಸಾಗ್ರಾ ತಾಲ್ ನಲ್ಲಿ ಸಾರ್ವಜನಿಕ ಸಮಸ್ಯೆ ಆಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಗೃಹ ಹೆಚ್ಚುವರಿ ಮುಖ್ಯ ಪ್ರಧಾನ ಕಾರ್ಯದರ್ಶಿ ಅವ್ನಿಶ್ ಅವಸ್ಥಿ ಅವರೊಂದಿಗೆ ಉಪಸ್ಥಿತರಿದ್ದರು.
ನಸೀಮ್, ವಸೀಮ್ ಮತ್ತು ಗೋಲು ವಿರುದ್ಧ ಹತ್ಯೆ ಆರೋಪಿಗಳಾಗಿದ್ದು, ಲೋಕಸಭೆ ಚುನಾವಣೆ ಮತ್ತು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಹತ್ಯೆ ಎಸಗಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
, ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆ ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ, ಈ ಕುರಿತು ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ರಾಷ್ಟ್ರೀಯತೆ ಎಂದರೆ ಜನರ ಸಮಸ್ಯೆಗಳನ್ನು ಬಗೆ ಹರಿಸುವುದೇ ಹೊರತು ಅವುಗಳನ್ನು ಹತ್ತಿಕ್ಕುವುದಲ್ಲ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.ಅಮೇಥಿಯಲ್ಲಿ ಕೇಂದ್ರ ಮಂತ್ರಿ ಸ್ಮೃತಿ ಇರಾನಿ ಶೂಗಳನ್ನು ವಿತರಿಸುತ್ತಿದ್ದಾರೆ ಎಂದು ಆರೋಪಿಸಿದ ಪ್ರಿಯಾಂಕಾ ಮಾಧ್ಯಮಗಳ ಎದುರಿಗೆ ಇವೆಲ್ಲವನ್ನೂ ಮಾಡುತ್ತಿರುವುದು ತಪ್ಪು ಎಂದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಮತ್ತು ಕೇರಳದ ವಯನಾಡ್ ನಿಂದ ಸ್ಪರ್ಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಅಮೇಥಿಯಲ್ಲಿ ಸಲ್ಲಿಸಿದ್ದ ನಾಮಪತ್ರಕ್ಕೆ ಸ್ವತಂತ್ರ ಅಭ್ಯರ್ಥಿ ಧ್ರುವಪಾಲ್ ಕೌಶಲ್ ಆಕ್ಷೇಪ ವ್ಯಕ್ತಪಡಿಸಿದ್ದರು.
ಇತ್ತೀಚಿಗೆ ಮಧ್ಯಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಘಟಕ 'ಶಿವಭಕ್ತ' ಎಂದು ಕರೆದು ಭಾರಿ ಸುದ್ದಿ ಮಾಡಿತ್ತು. ಈಗ ವಿಶೇಷವೆಂದರೆ ಸೋಮವಾರದಂದು ತಮ್ಮ ಕ್ಷೇತ್ರ ಅಮೇಥಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕನ್ವಾರಿಯಾ ಸಂಘವು ರಾಹುಲ್ ಗೆ ಬಂ ಬಂ ಭೋಲೆ ಎನ್ನುವ ಘೋಷಣೆಗಳ ಮಧ್ಯ ಸ್ವಾಗತಕೋರಿತು.
ಪೋಸ್ಟರ್ ಮೇಲೆ, ಅಭಯ್ ಶುಕ್ಲಾ ಎಂಬಾತ ತನ್ನ ಹೆಸರನ್ನು ಬರೆಯುವುದಕ್ಕೆ ಮುಂಚೆಯೇ ಕಾಂಗ್ರೆಸ್ ಕಾರ್ಯಕರ್ತ, ಅಭಯ್ ಶುಕ್ಲಾ ಗೌರಿಗನ್ಜ್ ಅಮೆಥಿ ಎಂದು ಹೇಳದೆ ಇರುವ ವ್ಯಕ್ತಿಯ ಹೆಸರನ್ನು ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.