ಹಿರಿಯ ಅಧಿಕಾರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ನಗರದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ರಾತ್ರಿ 10 ರ ಸುಮಾರಿಗೆ ಸಚಿವಾಲಯ ಹೇಳಿಕೆ ನೀಡಿದೆ.
ದೆಹಲಿ ಕೋಮು ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡುತ್ತಾ ದೆಹಲಿಯಲ್ಲಿ ಶಾಂತಿ ನೆಲೆಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಮತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ದೆಹಲಿಯಲ್ಲಿನ ಹಿಂಸಾಚಾರದ ಜವಾಬ್ದಾರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಹಿಸಿಕೊಳ್ಳಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹೇಳಿದರು, ಈಶಾನ್ಯ ದೆಹಲಿಯ ಕೆಲವು ಭಾಗಗಳಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ 21 ಜನರು ಸಾವನ್ನಪ್ಪಿದ್ದಲ್ಲದೆ ಕನಿಷ್ಠ 200 ಜನರು ಗಾಯಗೊಂಡಿದ್ದಾರೆ.
ಈಶಾನ್ಯ ದೆಹಲಿಯಲ್ಲಿನ ಗಲಭೆಗಳನ್ನು ನಿಯಂತ್ರಿಸಲು ದೆಹಲಿ ಪೊಲೀಸ್ ವಿಫಲವಾದ ಕಾರಣ, ಸರ್ಕಾರವು ತಕ್ಷಣವೇ 1985 ರ ಬ್ಯಾಚ್ ಐಪಿಎಸ್ ಅಧಿಕಾರಿ - ಎಸ್ ಎನ್ ಶ್ರೀವಾಸ್ತವನನ್ನು ಸಿಆರ್ಪಿಎಫ್ ನಿಂದ ದೆಹಲಿ ಪೊಲೀಸರಿಗೆ ವಾಪಸ್ ಕಳುಹಿಸಿತು ಮತ್ತು ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ದೆಹಲಿ ವಿಶೇಷ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿತು
ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ನ ಭಾಗವೆಂದು ಹೇಳಿಕೊಳ್ಳುವ ಚೀನಾ, ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಭೇಟಿಯ ಸಂದರ್ಭದಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದ್ದನ್ನು ತೀವ್ರವಾಗಿ ವಿರೋಧಿಸಿದೆ, ಇದು ಬೀಜಿಂಗ್ನ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ ಮತ್ತು ರಾಜಕೀಯ ಪರಸ್ಪರ ನಂಬಿಕೆಯನ್ನು ಹಾಳುಮಾಡಿದೆ ಎಂದು ಹೇಳಿದೆ.
ಫೆಬ್ರವರಿ 17 ರಂದು ರಾಂಚಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಜೆವಿಎಂ ಔಪಚಾರಿಕವಾಗಿ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಓಂ ಮಾಥುರ್ ಅವರೊಂದಿಗೆ ಹಾಜರಿರುತ್ತಾರೆ ಎನ್ನಲಾಗಿದೆ.
ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ಶಸ್ತ್ರಸಜ್ಜಿತ ವ್ಯಕ್ತಿ ರಾಮ್ ಭಕ್ತ ಗೋಪಾಲ್ ಎಂದು ವರದಿಯಾದ ನಂತರ ಗೃಹ ಸಚಿವ ಅಮಿತ್ ಶಾ ಕೇಂದ್ರ ಸರ್ಕಾರ ಇಂತಹ ಘಟನೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬುಧವಾರ ಹೇಳಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಬೆದರಿಕೆಗಳಿಗೆ ಹೆದರದ ಸಿಂಹ ಎಂದು ಬಣ್ಣಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬುಧವಾರ ಹೇಳಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಬೆದರಿಕೆಗಳಿಗೆ ಹೆದರದ ಸಿಂಹ ಎಂದು ಬಣ್ಣಿಸಿದರು.
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ದೇಶದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಒಡಕು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಭಾರತದ ಕಮ್ಯುನಿಸ್ಟ್ ಪಕ್ಷದ ಮುಖಂಡ ಕನ್ಹಯ್ಯ ಕುಮಾರ್ ಆರೋಪಿಸಿದ್ದಾರೆ.
ಲಖನೌದಲ್ಲಿ ನಡೆದ ರ್ಯಾಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕುರಿತು ಚರ್ಚಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಕ್ಷ ನಾಯಕರಿಗೆ ಸವಾಲು ಹಾಕಿದ ಒಂದು ದಿನದ ನಂತರ, ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಬುಧವಾರ ಉತ್ತರಿಸಿದ್ದಾರೆ. ಆದರೆ ಸಮಸ್ಯೆಯು ಅಭಿವೃದ್ಧಿಯಾಗಿದೆ ಎಂದು ಅವರು ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಹಿಂದಕ್ಕೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಹೇಳಿದ್ದಾರೆ. ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕಾಯ್ದೆ ಬಗ್ಗೆ ಬಿಜೆಪಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಿದೆ ಶಾ ಎಂದು ಹೇಳಿದ್ದಾರೆ
ಚುನಾವಣೆಗೆ ಮೊದಲು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಮಹದಾಯಿ ವಿವಾದ ಬಗೆ ಹರಿಯಲಿದೆ ಎಂದಿದ್ದೀರಿ ಎಂದು ರಾಜ್ಯಕ್ಕೆ ಬಿಜೆಪಿ ನೀಡಿದ್ದ ಭರವಸೆಯನ್ನು ನೆನಪಿಸಿದ ರಾಜ್ಯ ಕಾಂಗ್ರೆಸ್.
ಪ್ರಸಕ್ತ ಅವಧಿ ಪ್ರಧಾನಿ ಮೋದಿಯವರದ್ದಲ್ಲ ಅಮಿತ್ ಶಾ ಅವರದ್ದು, ಇದರಿಂದಾಗಿ ಇಬ್ಬರ ನಡುವೆ ಆಂತರಿಕ ಸಂಘರ್ಷ ನಡೆಯುತ್ತಿದೆ. ಈ ಸಂಘರ್ಷದಿಂದಾಗಿ ದೇಶದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಛತ್ತೀಸ್ ಗಡ್ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.