ಬಿಜೆಪಿ ಸಮಾವೇಶಗಳಲ್ಲಿ ಸೇನೆಯ ಬಗ್ಗೆ ಹೇಳಿಕೆಗಳನ್ನು ನೀಡುವುದು ಮತ್ತು ದ್ವೇಷಪೂರಿತ ಭಾಷಣ ಮಾಡುವ ಮೂಲಕ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಸೋಮವಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಎಲ್.ಕೆ.ಅಡ್ವಾಣಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅಂತಹ ನಾಯಕರು ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸುವುದು ನಿಜಕ್ಕೂ ಗೌರವದ ಸಂಗತಿ ಎಂದು ಹೇಳಿದರು.
ಉತ್ತರ ಪ್ರದೇಶದ ಚುನಾವಣಾ ಕಣ ರಂಗೇರಿಸಲು ಬಿಜೆಪಿ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಪಕ್ಷದ ಮುಖ್ಯಸ್ಥ ಅಮಿತ್ ಶಾ, ರಾಜ್ನಾಥ್ ಸಿಂಗ್, ನಿತಿನ್ ಗಡ್ಕರಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಮತ್ತು ಉಮಾ ಭಾರತಿ ಸೇರಿದಂತೆ 40 ಜನರ ಹೆಸರುಗಳು ಪಟ್ಟಿಯಲ್ಲಿವೆ.
ಪಾಕಿಸ್ತಾನದ ಬಾಲಕೋಟ್ ನ ಉಗ್ರರ ನೆಲೆಯ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದ್ದಕ್ಕೆ 250 ಕ್ಕೂ ಅಧಿಕ ಉಗ್ರರು ಹತ್ಯೆಯಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಅವರ ಹೇಳಿಕೆಯೂ ಕೇಂದ್ರ ಸಚಿವ ಎಸ್.ಎಸ್. ಅಹ್ಲುವಾಲಿಯಾ ಅವರ ಹೇಳಿಕೆಯ ನಂತರ ಬಂದಿದೆ.
ಫೆ.14 ರಂದು ಸಿಂಧನೂರಿನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ವಿಧಾನಸಭಾ ಚುನಾವಣೆಯಲ್ಲಿ ಕೆಲವೇ ಕೆಲವು ಸೀಟುಗಳ ಅಂತರದಲ್ಲಿ ಸೋತೆವು. ಆದರೆ ಆ ಸೋಲು ಮುಂಬರುವ ಲೋಕಸಭಾ ಚುನಾವಣೆಗೆ ಗೆಲುವಿನ ಮುನ್ನುಡಿ ಬರೆಯುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದರು.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಅಯೋಧೆಯಲ್ಲಿ ಅದೇ ಸ್ಥಳದಲ್ಲಿ ಆದಷ್ಟು ಬೇಗ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಕರ್ನಾಟಕದ ಜನತೆಗೆ ಹೇಳಬಯಸುವೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.