ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ಮಗ್ನವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಹುಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಅಲ್ಕದೆ, ಹಿಂದು-ಮುಸ್ಲಿಂ ಸಾಮರಸ್ಯದ ಜೀವನ ನಡೆಸದಂತೆ ವಾರಾವರಣ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮುಖ್ಯ ಕಾರ್ಯದರ್ಶಿ ಕೂಡಲೇ ಇಬ್ಬರನ್ನು ಕರೆದು ಎಚ್ಚರಿಕೆ ನೀಡಬೇಕು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಸರಕಾರ ಇದೆಯಾ? ಇಲ್ಲವಾ? ಎನ್ನುವ ಅನುಮಾನ ಉಂಟಾಗಿದೆ ಎಂದರು.
ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. @CMofKarnataka
ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.