ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಅಬ್ದುಲ್ಲಾ ಅವರಂತಹ ನಾಯಕರು ಭಯೋತ್ಪಾದಕರಲ್ಲ ಮತ್ತು "ಪ್ರತ್ಯೇಕಿಸಲು ಸಾಧ್ಯವಿಲ್ಲ" ಎಂದು ಗುಡುಗಿದ್ದಾರೆ.
ಸರ್ಕಾರ ಏಕಪಕ್ಷೀಯವಾಗಿ ಕಾಶ್ಮೀರವನ್ನು ಹರಿದುಹಾಕಿದ್ದರಿಂದ ಅಲ್ಲಿನ ಚುನಾಯಿತ ಪ್ರತಿನಿಧಿಗಳನ್ನು ಬಂಧಿಸಿದ್ದರಿಂದ, ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ್ದರಿಂದ ರಾಷ್ಟ್ರೀಯ ಏಕತೆ ವೃದ್ಧಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಜಮ್ಮು, ಕಾಶ್ಮೀರ ಮತ್ತು ಲಡಾಕ್ನಲ್ಲಿ ಶಾಂತಿ, ಸಮೃದ್ಧಿ ಮತ್ತು ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ. 370 ನೇ ವಿಧಿಯನ್ನು ರದ್ದುಪಡಿಸುವುದು ಜನ ಸಂಘದ ದಿನಗಳಿಂದಲೂ ಬಿಜೆಪಿಯ ಪ್ರಮುಖ ಸಿದ್ಧಾಂತದ ಒಂದು ಭಾಗವಾಗಿದೆ ಎಂದು ಅಡ್ವಾಣಿ ಹೇಳಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ ಪಿಡಿಪಿಯ ರಾಜ್ಯಸಭೆ ಸಂಸದರಾದ ನಾಜಿರ್ ಅಹ್ಮದ್ ಲವಾಯ್ ಮತ್ತು ಎಂ.ಎಂ.ಫಯಾಜ್ ತಾವು ಧರಿಸಿದ್ದ ಅಂಗಿಯನ್ನು ಹರಿದುಕೊಂಡು ಪ್ರತಿಭಟನೆ ನಡೆಸಿದರು.
ಈ ಅಂತರರಾಷ್ಟ್ರೀಯ ವಿವಾದದಲ್ಲಿ ಪಾಕಿಸ್ತಾನವೂ ಸಹ ಒಂದು ಪಕ್ಷವಾಗಿರುವುದರಿಂದ ಈ ಕಾನೂನುಬಾಹಿರ ನಿರ್ಧಾರಗಳ ವಿರುದ್ಧ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಹೇಳಿದೆ.
ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸುವ ಬಗ್ಗೆ ಪ್ರಸ್ತಾಪ ಮಂಡನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ವಿರೋಧ ಪಕ್ಷಗಳ ಸದಸ್ಯರಿಂದ ಗದ್ದಲ, ಕೋಲಾಹಲ.
ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎಸ್ಪಿ ಮಲಿಕ್ ಅವರು ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ರದ್ದುಪಡಿಸುವ ಬಗ್ಗೆ ಅಥವಾ ವಿರೂಪಗೊಳಿಸುವಿಕೆಯ ಬಗ್ಗೆ ಯಾವುದೇ ಕ್ರಮಗಳನ್ನು ರೂಪಿಸುವುದಿಲ್ಲ ಎಂದು ತಮ್ಮ ಪಕ್ಷಕ್ಕೆ ಭರವಸೆ ನೀಡಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಶನಿವಾರದಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.