ನಾಡು ಕಂಡಂತಹ ಧೀಮಂತ ರಾಜಕಾರಣಿ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥವಾಗಿ ನಿರ್ಮಿಸಿದ ಕೆ. ಎಚ್. ಕಲಾಸೌಧ ಆರಂಭದಲ್ಲಿ ಬಿಬಿಎಂಪಿಯಿಂದಲೇ ನಿರ್ವಹಣೆಯಾಗುತ್ತಿತ್ತು. ನಂತರ 2009ರಿಂದ 2018ರವರೆಗೂ ಪ್ರಕಸಂ (ಪ್ರದರ್ಶನ ಕಲಾ ಸಂಸ್ಥೆ) ಅಡಿಯಲ್ಲಿತ್ತು. ತದನಂತರ ಪ್ರಭಾತ್ ಆಡಿಟೋರಿಯಂ ಗುತ್ತಿಗೆಗೆ ಪಡೆದು ನಿರ್ವಹಣೆ ಮಾಡಿದ್ದು, ಈ ಅವಧಿಯಲ್ಲಿ ಕಲಾಸೌಧದಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆದಿವೆ.
ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರವೇಶ ಶುಲ್ಕ ₹300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ.
ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2021-22ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕಲಾವಿದರಿಗೆ ಧನಸಹಾಯ ನೀಡಲಾಗುತ್ತಿದ್ದು, ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.