ಕೊರೋನಾ ಸೋಂಕಿನ ಪ್ರಮಾಣ, ಸ್ಥಿತಿಗತಿ ಹಾಗೂ ವ್ಯವಸ್ಥೆಯ ಸದೃಢತೆಯನ್ನು ಪರಿಶಿಲೀಸಿದ ನಂತರ ಲಾಕ್ಡೌನ್ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಂದು ನಿರ್ಧಾರಕ್ಕೆ ಬರಬಹುದು. ಸಮಾಜದ ಹಿತದೃಷ್ಟಿ ಕಾಯುವ ಉದ್ದೇಶದಿಂದ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ಸಾರ್ವಜನಿಕರು ತಪ್ಪದೇ ಪಾಲಿಸಬೇಕು ಎಂದು ಮನವಿ ಮಾಡಿದರು.
ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣದ ಸಮರ್ಥ ನಿರ್ವಹಣೆಗೆ ನಮ್ಮ ಯುವಜನತೆಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿ ಕೊಡಲು ಬಹಳಷ್ಟು ಕಾರ್ಯಕ್ರಮಗಳನ್ನು ಮಾಡಿ ಮುಗಿಸಲಿದ್ದೇವೆ. ಎಲ್ಲಾ ರೀತಿಯಲ್ಲೂ ನಮ್ಮ ಜನತೆಗೆ, ಸಮಾಜಕ್ಕೆ ಇನ್ನಷ್ಟು ಗುಣಮಟ್ಟದ ಕೊಡುಗೆ ನೀಡಲಿಕ್ಕೆ ಏನೆಲ್ಲಾ ಬೇಕು ಎಂಬುದನ್ನು ನಾವು ಯೋಚಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.
ಪ್ರತಿಪಕ್ಷದವರಿಗೆ ವಾಸ್ತವದ ಅರಿವಿರಲಿಲ್ಲ, ಜನಾಭಿಪ್ರಾಯ ಗೊತ್ತಿರಲಿಲ್ಲ. ಹಾಗಾಗಿ, ಬಾಯಿಗೆ ಬಂದ ಹೇಳಿಕೆ ನೀಡುತ್ತಿದ್ದರು - ಪ್ರತಿಪಕ್ಷ ನಾಯಕರ ವಿರುದ್ಧ ಡಿಸಿಎಂ ಡಾ. ಅಶ್ವತ್ಥನಾರಾಯಣ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.