Asia Cup-2023 in Pakistan: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ತುರ್ತು ಸಭೆಯಲ್ಲಿ ಪಾಲ್ಗೊಳ್ಳಲು ಜೈ ಶಾ ಬಹ್ರೇನ್ ತಲುಪಿದ್ದಾರೆ. ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಅವರ ಕೋರಿಕೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ. ಇದರಲ್ಲಿ ಪಾಕಿಸ್ತಾನದ ಏಷ್ಯಾಕಪ್ ಆತಿಥ್ಯ ಹಕ್ಕುಗಳ ಭವಿಷ್ಯ ನಿರ್ಧಾರವಾಗಲಿದೆ.
Asia Cup 2023, Ind Vs Pak: ಭಾರತ ಮತ್ತು ಪಾಕಿಸ್ತಾನ ತಂಡಗಳು ಗ್ರೂಪ್ 1ರಲ್ಲಿ ಸ್ಥಾನ ಪಡೆದಿದ್ದರೆ, ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ ಈ 2 ತಂಡಗಳೊಂದಿಗೆ ಮೊದಲನೇ ಗುಂಪಿನಲ್ಲಿ ಸ್ಥಾನ ಪಡೆಯಲ್ಲಿದೆ. ಇನ್ನು 2ನೇ ಗುಂಪಿನಲ್ಲಿ ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಸ್ಥಾನ ಪಡೆದಿವೆ.
2023ರ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವಿಲ್ಲದೆ ಆಡಬೇಕಾಗುತ್ತದೆ ಎಂದು ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂತಹ ಹೇಳಿಕೆಗಳು ಅಂತರಾಷ್ಟ್ರೀಯ ಕ್ರಿಕೆಟ್ ಸಮುದಾಯವನ್ನು ವಿಭಜಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು 2023 ರ ವಿಶ್ವಕಪ್ಗಾಗಿ ಭಾರತಕ್ಕೆ ಪಾಕಿಸ್ತಾನದ ಭೇಟಿಯ ಮೇಲೆ ಪರಿಣಾಮ ಬೀರಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೇಳಿದೆ.
ಕೊರೊನಾ ಹಿನ್ನಲೆಯಲ್ಲಿ ಈಗ ಏಷ್ಯಾಕಪ್ ನ 2021 ಆವೃತ್ತಿಯು ಈಗ 2023 ರಲ್ಲಿ ನಡೆಯಲಿದೆ ಎನ್ನಲಾಗಿದೆ.ಐಪಿಎಲ್ ಸೇರಿದಂತೆ ಹಲವಾರು ಟೂರ್ನಿಗಳು ಈಗಾಗಾಲೇ ಕೊರೊನಾದಿಂದ ಸ್ಥಗಿತಗೊಂಡು ಮತ್ತೆ ಆರಂಭವಾಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.