ಸುಮಾಲತಾ ಅಂದ್ರೆ ಕುಮಾರಸ್ವಾಮಿಗೆ ಭಯ. ಅಂಬರೀಶ್ ರಿಂದ ಏನೂ ಅನುಕೂಲ ಆಗಿಲ್ಲ ಅಂತ ಹೇಳ್ತಾರೆ. ಅಂಬರೀಶ್ ಬಗ್ಗೆ ಮಂಡ್ಯ ಜನರಿಗೆ ಗೊತ್ತು. ಏಳಕ್ಕೆ ಏಳು ಸೀಟ್ ಜೆಡಿಎಸ್ ಗೆಲ್ಲೊಕೆ ಅಂಬರೀಶ್ ಕಾರಣ. ಸಿಎಂ ಹಾಗೋಕು ಅವರೇ ಕಾರಣ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದರು.
ಲಿಂಗಾಯತ ಸಮಾಜವನ್ನ ಒಡೆಯುವಂತ ಕೆಲಸ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ 50 ವರ್ಷದಿಂದ ಲಿಂಗಾಯತರನ್ನು ಸಿಎಂ ಮಾಡಿಲ್ಲ. ಕಾಂಗ್ರೆಸ್ನಲ್ಲಿ ಎಸ್ ನಿಜಲಿಂಗಪ್ಪ ಹೊರತುಪಡಿಸಿ ಲಿಂಗಾಯತ ಸಿಎಂ ಆಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದರು.
ಯಡಿಯೂರಪ್ಪ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದ ಕುರಿತು ಮಾತನಾಡಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆಗಿದೆ. ಕಾಂಗ್ರೆಸ್ ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು, ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಆದ್ರೆ, ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು.
ಸಿದ್ದರಾಮಯ್ಯ ಅವರಿಗೆ ಸ್ವಂತ ಬಲ ಇದ್ದರೆ ಗೆಲ್ಲುತ್ತಾರೆ, ಇಲ್ಲದಿದ್ದರೆ, ಗೆಲ್ಲುವುದಿಲ್ಲ. ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್- ಜೆಡಿಎಸ್ ಸೇರಿಕೊಂಡಿದ್ದಾರೆ. ಇದರಿಂದ ನನಗೇನೂ ಭಯವಿಲ್ಲ. ನಾನು ಸ್ವಂತ ಬಲದಿಂದ ಗೆಲ್ಲುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬರೋದು ಮುಖ್ಯ. ಮುಂದಿನ ಸಿಎಂ ಯಾರು ಅನ್ನೋದನ್ನ ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ. 19 ರಂದು ನಾನು ನಾಮಪತ್ರ ಸಲ್ಲಿಕೆ ಮಾಡ್ತೀನಿ. ನಾವು ಮೆಜಾರಿಟಿ ಬಂದೇ ಬರ್ತೀವಿ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ವಿ. ಸೋಮಣ್ಣ ಅವರಿಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದ್ದು ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.