ತುಳಸಿ ಪೂಜೆಯ ಸಲಹೆಗಳು: ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ದೇವರ ಆಶೀರ್ವಾದಕ್ಕಾಗಿ ಜನರು ತುಳಸಿ ಗಿಡವನ್ನು ನೆಟ್ಟು ಅದನ್ನು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪೂಜಿಸುತ್ತಾರೆ. ಈ ಸಮಯದಲ್ಲಿ ತುಳಸಿಗೆ ನೀರನ್ನು ಸಹ ಅರ್ಪಿಸಲಾಗುತ್ತದೆ. ಆದರೆ ಕೆಲವು ದಿನ ತುಳಸಿಗೆ ನೀರು ಅರ್ಪಿಸುವುದಕ್ಕೆ ನಿಷೇಧವಿದೆ.
Astro tips for tulsi : ತುಳಸಿ ಸಸ್ಯವನ್ನು ಹಿಂದೂ ಧರ್ಮದಲ್ಲಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂದು ಹೇಳಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತುಳಸಿಯನ್ನು ನಿತ್ಯವೂ ಪೂಜಿಸಿದರೆ ಮನೆಯಲ್ಲಿ ಲಕ್ಷ್ಮಿಯು ಶಾಶ್ವತವಾಗಿ ನೆಲೆಸುತ್ತಾಳೆ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ತುಳಸಿ ಪೂಜೆಯ ಸಮಯದಲ್ಲಿ ನಿರ್ದಿಷ್ಟ ಮಂತ್ರವನ್ನು ಪಠಿಸಿದರೆ, ಲಕ್ಷ್ಮೀ ದೇವಿಯು ಎಲ್ಲಾ ಇಷ್ಟಾರ್ಥಗಳನ್ನು ನೆರವೆರಿಸುತ್ತಾಳೆ ಎಂದು ಹೇಳಲಾಗುತ್ತದೆ. ಅಲ್ಲದೆ ಈ ಮಂತ್ರ ಪಠಿಸುವ ಮನೆಯಲ್ಲಿ ಲಕ್ಷ್ಮೀ ಶಾಶ್ವತವಾಗಿ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.