ಅಯೋಧ್ಯೆ ದೇವಾಲಯ-ಮಸೀದಿ ವಿವಾದ ಪ್ರಕರಣದಲ್ಲಿ ತನ್ನ ಐತಿಹಾಸಿಕ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ಗೆ ಕೋರಲಾಗುವುದು ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ, ಒಂದು ತಿಂಗಳೊಳಗೆ ಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು ಪ್ರಕಟಿಸಿದೆ.
ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಡಿಯಲ್ಲಿ ಮಸೀದಿ ನಿರ್ಮಿಸಲು ಐದು ಎಕರೆ ಭೂಮಿಯನ್ನು ಅಯೋಧ್ಯೆಯಲ್ಲಿ ಸ್ವಾಧೀನಪಡಿಸಿಕೊಂಡಿರುವ 67 ಎಕರೆ ಭೂಮಿಯಲ್ಲಿರಬೇಕು, ಈ ಪ್ರಕರಣದ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿ ಮತ್ತು ಹಲವಾರು ಸ್ಥಳೀಯ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪಿನ ಹಿನ್ನೆಲೆಯಲ್ಲಿ, ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರು ಭಾನುವಾರ ಇಲ್ಲಿ ನಡೆದ ಅಂತರ್-ಧಾರ್ಮಿಕ ನಂಬಿಕೆ ಸಭೆಯಲ್ಲಿ ದೇಶದಲ್ಲಿ ಶಾಂತಿ ಮತ್ತು ಸಾಮರಸ್ಯದ ಬಗ್ಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಶತಮಾನಗಳಷ್ಟು ಹಳೆಯದಾದ ಅಯೋಧ್ಯೆಯ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ನ ಐತಿಹಾಸಿಕ ತೀರ್ಪಿನ ಕೆಲವೇ ಗಂಟೆಗಳ ನಂತರ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ನವ ಭಾರತದಲ್ಲಿ ಭಯ, ಕಹಿ ಮತ್ತು ನಕಾರಾತ್ಮಕತೆಗೆ ಸ್ಥಾನವಿಲ್ಲ ಎಂದು ಹೇಳಿದರು.
ಅಯೋಧ್ಯೆ ಭೂ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಐತಿಹಾಸಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಶ್ಲಾಘಿಸಿದ್ದಾರೆ. ಈ ತೀರ್ಪು ಭಾರತದ ಏಕತೆ ಮತ್ತು ಅದರ ಶ್ರೇಷ್ಠ ಸಂಸ್ಕೃತಿಗೆ ಶಕ್ತಿ ನೀಡುತ್ತದೆ ಎಂದು ಶಾ ಹೇಳಿದ್ದಾರೆ.
ದಶಕಗಳಷ್ಟು ಹಳೆಯದಾದ ಅಯೋಧ್ಯಾ ಭೂ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದ ಕೆಲವೇ ಕ್ಷಣಗಳಲ್ಲಿ, #AYODHYAVERDICT ಮತ್ತು #rammandir ನಂತಹ ಹ್ಯಾಶ್ಟ್ಯಾಗ್ಗಳು ಭಾರತ ಮತ್ತು ವಿಶ್ವದಾದ್ಯಂತ ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗಿವೆ.
ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ತೃಪ್ತಿ ಇಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸದುದ್ದೀನ್ ಒವೈಸಿ ಹೇಳಿದ್ದಾರೆ.
ಸುಪ್ರೀಂಕೋರ್ಟ್ ನೀಡಿರುವ ಅಯೋಧ್ಯೆಯ ತೀರ್ಪುನ್ನು ಪ್ರಧಾನಿ ಮೋದಿ ಸ್ವಾಗತಿಸಿ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಜನರ ನಂಬಿಕೆಯನ್ನು ಪುನರುಚ್ಚರಿಸುತ್ತದೆ' ಎಂದು ಹೇಳಿದ್ದಾರೆ. ಇದೆ ವೇಳೆ ಅವರು ಜನರಲ್ಲಿ ಶಾಂತಿ ಮತ್ತು ಐಕ್ಯತೆಗಾಗಿ ಮನವಿ ಮಾಡಿದ್ದಾರೆ.
ಅಯೋಧ್ಯೆ ತೀರ್ಪು ಹಿನ್ನಲೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮುಂಚಿತವಾಗಿ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಭದ್ರತಾ ಕ್ರಮಗಳ ಕುರಿತಾಗಿ ಮಾಹಿತಿ ಪಡೆದರು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅಯೋಧ್ಯ ತೀರ್ಪಿಗೂ ಮುಂಚಿತವಾಗಿ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆ ರಾಮ ಮಂದಿರ ವಿವಾದವು ಭಾರತದಲ್ಲಿ ರಾಜಕೀಯ, ಐತಿಹಾಸಿಕ ಮತ್ತು ಸಾಮಾಜಿಕ-ಧಾರ್ಮಿಕ ಚರ್ಚೆಯ ಕೇಂದ್ರವಾಗಿದೆ. ಉತ್ತರಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿರುವ ಅಯೋಧ್ಯಾ ನಗರವು ಈ ವಿವಾದದ ಕೇಂದ್ರ ಬಿಂದು. ಬಾಬ್ರಿ ಮಸೀದಿಯ ಇದ್ದ ಜಾಗದಲ್ಲಿ ಶ್ರೀರಾಮನು ಜನಿಸಿದ್ದು ಆದರೆ ಮಸೀದಿ ನಿರ್ಮಿಸಲು ಈ ಜಾಗದಲ್ಲಿನ ಹಿಂದು ದೇವಾಲಯವನ್ನು ತೆರವುಗೊಳಿಸಲಾಗಿತ್ತು ಎಂದು ಎನ್ನುವ ವಾದವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.