ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.
ಕೊಪ್ಪಳದಲ್ಲಿ ಕೂಡ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಕಿಡಿಕಾರಿದರು.
ನಾಮಪತ್ರ ಸಲ್ಲಿಸುವಾಗಲೆಲ್ಲಾ ಈ ನಂಬರ್ ಶುಭಶಕುನವನ್ನೇ ನುಡಿಯುತ್ತಿತ್ತು ಯಾಕೆ ಗೊತ್ತಾ? ಬಾಸಿಡರ್ ಕಾರು ಬಳಸುತ್ತಿದ್ದ ತಂದೆ, ಪುತ್ರನ ರಾಜಕೀಯ ಭವಿಷ್ಯಕ್ಕೆ ಇದೇ ಲಕ್ಕಿ ನಂಬರ್ ಆಯ್ತಾ...ಏನಿದರ ಗುಟ್ಟು ?.
ರಾಜ್ಯದಲ್ಲಿ ಮೋದಿ ಮತ್ತು ಅಮಿತ್ ಶಾ ಆಶೀರ್ವಾದ ದಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ.140 ಕ್ಕು ಸೀಟ್ ಗಳನ್ನ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 31ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಮುಂದಿನ ಯಾವುದೇ ಪ್ರಕ್ರಿಯೆ ನಡೆಸದಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಭಾರೀ ಹಿನ್ನಡೆ
ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ.ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದನ್ನು ಬಿಟ್ಟು ಯಡಿಯೂರಪ್ಪ ಅವರ ಸರ್ಕಾರ ಹೊಸದಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿಮಾಡಿಲ್ಲ. ದುರಂತವೆಂದರೆ ನಮ್ಮ ಹಲವು ಕಾರ್ಯಕ್ರಮಗಳಿಗೂ ಅನುದಾನ ನೀಡದೆ ಇತಿಶ್ರೀ ಹಾಡಿದ್ದೇ ರಾಜ್ಯ ಬಿಜೆಪಿ ಸರ್ಕಾರದ ಈ ವರೆಗಿನ ಸಾಧನೆ ಎಂದು ಸಿದ್ದರಾಮಯ್ಯ ಅವರು ಟೀಕಾ ಪ್ರಹಾರ ನಡೆಸಿದ್ದಾರೆ.
ರೈತರು ಮುಂಗಾರು ಬೆಳೆಯನ್ನು ಸಂಪೂರ್ಣ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ, ಆದರೆ ಅವರ ಕಷ್ಟಗಳನ್ನು ಕೇಳುವವರೇ ಇಲ್ಲ.ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿ ಹೋಗಿರುವ ಸರ್ಕಾರ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷ ಉಳುವವನೇ ಭೂಮಿಯ ಒಡೆಯ ಎಂದು ಘೋಷಿಸಿ, ಉಳುವವನಿಗೆ ಭೂಮಿಯನ್ನು ಕೊಟ್ಟಿದೆ. ಆದರೆ ಈ ಸರ್ಕಾರ ಏನು ಮಾಡುತ್ತಿದೆ? ಕೃಷಿ ಭೂಮಿಯನ್ನು ಯಾರು ಬೇಕಾದರೂ ಖರೀದಿಸಬಹುದು ಅಂತಾ ಅವಕಾಶ ಕೊಟ್ಟಿದ್ದಾರೆ. ಆ ಮೂಲಕ ಯಡಿಯೂರಪ್ಪನವರು, ಅಶೋಕ್ ಅವರು ಸೇರಿ ಇಡೀ ರಾಜ್ಯವನ್ನು ಮಾರಲು ಹೊರಟಿದ್ದಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಡ್ಯದ ರೈತ ಧ್ವನಿ ಕಾರ್ಯಕ್ರಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.