ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಹೆಚ್ಚಿನ ಸಹಾಯ ಸಹಕಾರದ ಅಗತ್ಯವಿದೆ ಎಂದು ಆರೋಗ್ಯ ಸಚಿವರಲ್ಲಿ ಮನವಿ ಮಾಡಿದ ಸಚಿವ ಎಸ್. ಸುರೇಶ್ ಕುಮಾರ್
ಕೋವಿಡ್-19 ವಿಶ್ವದಾದ್ಯಂತ ಆವರಿಸಿದ್ದು ತಲ್ಲಣ ಉಂಟು ಮಾಡುತ್ತಿದೆ ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಶ್ರಮಿಸುತ್ತಿದ್ದು ಇದರ ನಿಯಂತ್ರಣಕ್ಕಾಗಿ ಸಾರ್ವಜನಿಕರ ಸಹಕಾರವು ಅತ್ಯವಶ್ಯಕವಾಗಿದೆ ಎಂದರು.
ರಾಜ್ಯದಲ್ಲಿನ 21 ಜಿಲ್ಲೆಗಳಲ್ಲಿನ ಸತತವಾಗಿ ಪ್ರವಾಸ ಮಾಡಿ ಕೊರೋನಾ ನಿಯಂತ್ರಣದ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಯುತ್ತಿದೆ. ಅಲ್ಲಿನ ಜಿಲ್ಲಾಡಳಿತ, ಆರೋಗ್ಯ ಇಲಾಖೆ , ವೈದ್ಯರುಗಳು, ಸಂಸದರುಗಳಿಂದ ಮಾಹಿತಿ ಸಂಗ್ರಹಣೆ ಮಾಡಿ ಕೋವಿಡ್-19 ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ಡಿ.ಕೆ. ಶಿವಕುಮಾರ್ ಮತ್ತು ಸುಧಾಕರ್ ಮೊದಲಿಂದಲೂ ಎಣ್ಣೆ-ಸೀಗೆಕಾಯಿ ಇದ್ದಂತೆ. ಇಬ್ಬರೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಶಿಷ್ಯರಾಗಿದ್ದರೂ, ಇಬ್ಬರೂ ಕಾಂಗ್ರೆಸ್ ಪಕ್ಷದಲ್ಲಿದ್ದಾಗಲೂ ಅವರ ಸಂಬಂಧ ಅಷ್ಟಕ್ಕಷ್ಟೇ. ಡಿ.ಕೆ. ಶಿವಕುಮಾರ್ ಪ್ರತಿನಿಧಿಸು ಕನಕಪುರಕ್ಕೆ ಸ್ಯಾಂಕ್ಷನ್ ಆಗಿದ್ದ ಮೆಡಿಕಲ್ ಕಾಲೇಜನ್ನು ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೊಂಡೊಯ್ದ ಮೇಲೆ ಇವರಿಬ್ಬರ ನಡುವಿನ ಗುದ್ದಾಟ ಇನ್ನಷ್ಟು ಹೆಚ್ಚಾಗಿತ್ತು.
ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಜನರಿಗೆ ಸ್ಪಂದಿಸುವ ಕೆಲಸ ಆಗುತ್ತಿಲ್ಲ ಎಂದು ಮೂದಲಿಸಿ ಬಿಜೆಪಿಗೆ ಹಾರಿ ಬಂದಿದ್ದ ಸುಧಾಕರ್ ಈಗ ಸ್ವತಃ ಸಚಿವರಾಗಿದ್ದಾರೆ. ಸ್ವತಃ ವೈದ್ಯರಾಗಿರುವ ಕಾರಣಕ್ಕೆ ಇವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯಂಥ ಮಹತ್ವದ ಖಾತೆಯನ್ನೇ ಕೊಡಲಾಗಿದೆ.
ಯಡಿಯೂರಪ್ಪ ಮಧ್ಯಪ್ರವೇಶದ ಬಳಿಕ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರ ನಡುವಿನ ಮುನಿಸು ಸ್ವಲ್ಪ ಮರೆಯಾಗಿತ್ತು. ಈಗ ಮತ್ತೆ ಅದು ಉಲ್ಬಣಿಸಿದೆ ಎಂದು ಹೇಳಲಾಗುತ್ತಿದೆ. ದೂರು ಹೈಕಮಾಂಡ್ ಅಂಗಳವನ್ನೂ ತಲುಪಿದೆ ಅಥವಾ ತಲುಪಲಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.