ಶಿವಸೇನಾ ನಾಯಕರ ಬಂಡಾಯದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಪತನಗೊಂಡ ಕೆಲವು ದಿನಗಳ ನಂತರ, ಸಂಜಯ್ ರಾವತ್ ಅವರು ತಮಗೂ ಕೂಡ ಗೌಹಾತಿಯಲ್ಲಿರುವ ಏಕನಾಥ್ ಶಿಂಧೆ ಹಾಗೂ ಇತರ ಬಂಡಾಯ ಶಾಸಕರನ್ನು ಸೇರಲು ಆಫರ್ ನೀಡಲಾಗಿತ್ತು ಎಂದು ಅವರು ಹೇಳಿದರು.
ಮಹಾರಾಷ್ಟ್ರದ ರಾಜಕೀಯ ನಾಟಕದಲ್ಲಿ ತಿರುವುಗಳು ಮುಂದುವರೆದಿರುವ ಬೆನ್ನೆಲ್ಲೇ ಇಂದು ಮುಂಬೈನಲ್ಲಿ ನಡೆದ ಶಿವಸೇನೆಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉದ್ಧವ್ ಠಾಕ್ರೆ, "ಚುನಾವಣೆಯಲ್ಲಿ ಗೆಲ್ಲಲು ನನ್ನ ತಂದೆಯ ಹೆಸರನ್ನು ಹೇಳಬೇಡಿ, ನಿಮ್ಮ ತಂದೆಯ ಹೆಸರನ್ನು ಬಳಸಿ" ಎಂದು ಹೇಳಿದರು.
ಇಂದು ನಮ್ಮ ದೇಶವು ಸಂಪೂರ್ಣವಾಗಿ ಸ್ವತಂತ್ರವಾಗಿದೆ. ಅದಕ್ಕಾಗಿ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಅಭಿನಂದಿಸುತ್ತೇನೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.