ನಗರದ ಡಾ.ರಾಜ್ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದಲ್ಲಿ ಜರ್ಮನಿ ದೇಶದಲ್ಲಿ ಸಿಕ್ಕ ಸಿಂಹ ಮಾನವನ ಹಾಗೂ ಮಹಿಳೆಯ ಆಕೃತಿಗಳ ಪ್ರತಿರೂಪಗಳನ್ನು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶನಕ್ಕಿರಿಸಲಾಗಿದೆ ಎಂದು ವಸ್ತು ಸಂಗ್ರಹಾಲಯ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟಾನ್ಫೊರ್ಡ್ ವಿಶ್ವವಿದ್ಯಾಲಯ ವಾರ್ಷಿಕವಾಗಿ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.
ನಗರದ ಹೊರವಲಯದಲ್ಲಿನ ಗುಗ್ಗರಹಟ್ಟಿಯ ನ್ಯಾಯಬೆಲೆ ಅಂಗಡಿ 115 ರ ಬದಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಸುಮಾರು 750 ಚೀಲ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡು ಮುಂದಿನ ಅಗತ್ಯ ಕ್ರಮ ವಹಿಸಿದೆ.
Bellary Railway Police Operation: ಆರೋಪಿಯನ್ನು ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆ ಗುಂತಕಲ್ನ ತಿಲಕ್ ನಗರದ ವಾಸಿ 38 ವರ್ಷ ವಯಸ್ಸಿನ ರಘು ಶಂಕರ್ ಎಂದು ಗುರುತಿಸಲಾಗಿದ್ದು, ಆರೋಪಿಯು ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ತಲಾ 01 ಕೆ.ಜಿ. ತೂಕದ 06 ಪಾಕೆಟ್ ಅಂದರೆ ಒಟ್ಟು 06 ಕೆ.ಜಿ. ಯಷ್ಟು ಗಾಂಜಾ ಸಾಗಿಸುತ್ತಿದ್ದುದನ್ನು ಬಳ್ಳಾರಿ ರೈಲ್ವೆ ಪೊಲೀಸರು ಪತ್ತೆಹಚ್ಚಿದ್ದಾರೆ. 06 ಕೆ.ಜಿ. ಗಾಂಜಾದ ಮೌಲ್ಯ 06 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದೆ. ಆರೋಪಿಯನ್ನು ಬಂಧಿಸಿ, ನಿಯಮಾನುಸಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Lok Sabha Election 2024:ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್ಎಸ್ಟಿ ಮತ್ತು ಎಸ್ಎಸ್ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
ನಗರ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದ ರೂ.5.60 ಕೋಟಿ ನಗದು, 3 ಕೆ.ಜಿ ಚಿನ್ನ (ಅಂದಾಜು ರೂ.1.40 ಕೋಟಿ ಮೌಲ್ಯ), 68 ಕೆ.ಜಿ ಬೆಳ್ಳಿ (ರೂ.21.50 ಲಕ್ಷ ಮೌಲ್ಯ), 103 ಕೆ.ಜಿ ಹಳೆ ಬೆಳ್ಳಿ (ರೂ.20.50 ಲಕ್ಷ ಮೌಲ್ಯ) ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
Lok Sabha Election 2024: ಅಬಕಾರಿ ಪೊಲೀಸ್ ವತಿಯಿಂದ 378.41 ಲೀಟರ್ (ರೂ.140698 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 93.60 ಲೀಟರ್ (ರೂ.44680 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟು 32 ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು ಅವರ ಮಾರ್ಗದರ್ಶನದಲ್ಲಿ ಬಳ್ಳಾರಿ ನಗರದ ಜಾಗೃತಿ ನಗರ, ಕವಾಡಿ ಸ್ಟ್ರೀಟ್, ರೇಷ್ಮೆ ಕಚೇರಿ ಹತ್ತಿರ ಯಾವುದೇ ಕ್ಲಿನಿಕ್ ಹೆಸರಿನ ಬೋರ್ಡ್ಗಳಿಲ್ಲದ 04 ನಕಲಿ ಕ್ಲಿನಿಕ್ಗಳ ಮೇಲೆ ದಾಳಿ ಮಾಡಿ, ಪರಿಶೀಲಿಸಲಾಗಿದ್ದು, ನಕಲಿ ವೈದ್ಯರಾದ ಕರೀಮ್, ಗೋವಿಂದ್, ಜಾವೀದ್, ಶಬಾನಾ ಅವರ ವಿರುದ್ಧ ಕೌಲ್ಬಜಾರ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ ಕುಮಾರಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಮಾನ್ಯ ನರೇಂದ್ರ ಮೋದಿ ಅವರಿಂದ ರೈಲ್ವೆ ಸಚಿವಾಲಯದ 508 ರೈಲ್ವೆ ನಿಲ್ದಾಣಗಳ ಪುನಾರಾಭಿವೃದ್ಧಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಗಸ್ಟ್ 06 ರಂದು ಬೆಳಗ್ಗೆ 9.15 ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು,ಅಂದು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
Prajwal Devaraj Birthday: ನಟ ಪ್ರಜ್ವಲ್ ದೇವರಾಜ್ ಇಂದು ಹುಟ್ಟು ಹಬ್ಬದ ಸಂಭ್ರಮ. ಸ್ಯಾಂಡಲ್ವುಡ್ ನಟನಿಗೆ ಸಿನಿ ಗಣ್ಯರು ಮಾತ್ರವಲ್ಲದೇ ಅಭಿಮಾನಿಗಳ ಶುಭಾಶಯ ಹರಿದು ಬರುತ್ತಿದೆ. ಇದೀಗ ಹುಟ್ಟು ಹಬ್ಬದ ಪ್ರಯುಕ್ತ ಫ್ಯಾನ್ಸ್ಗೆ ಗುಡ್ ನ್ಯೂಸ್ ನೀಡಿದ್ದಾರೆ.
Karnataka Politics: ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳು ಸಮೀಪಿಸುತ್ತಿದ್ದರೂ, ಇನ್ನು ಬಿಜೆಪಿ ವತಿಯಿಂದ ವಿಪಕ್ಷ ನಾಯಕ ಆಯ್ಕೆಆಗಿಲ್ಲ. ಈ ನಿಟ್ಟಿನಲ್ಲಿ ವಿಪಕ್ಷ ನಾಯಕರಾಗಿ ಬೇಕೆಂದು ಪ್ರಕಟಣೆ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.